Connect with us


      
ಕರ್ನಾಟಕ

ನ 8, 9 ರಂದು ಬುಡಕಟ್ಟುಉತ್ಸವ : ಶ್ರೀರಾಮುಲು

pratham

Published

on

ಚಿತ್ರುದುರ್ಗ, ನ 1 (ಯುಎನ್ಐ) ಚಿತ್ರದುರ್ಗದಲ್ಲಿ ನವೆಂಬರ್ ೮ ಹಾಗೂ ೯ರಂದು ಎರಡು ದಿನಗಳ ಕಾಲ ರಾಜ್ಯಮಟ್ಟದ ಬುಡಕಟ್ಟು ಉತ್ಸವ ಹಮ್ಮಿಕೊಳ್ಳಲಾಗುವುದು ಎಂದು ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬುಡಕಟ್ಟು ಸಮುದಾಯದ ಇತಿಹಾಸ, ಕಲೆ ಹಾಗೂ ಪರಂಪರೆ ಉಳಿಸುವ ನಿಟ್ಟಿನಲ್ಲಿ ಸರ್ಕಾರದ ವತಿಯಿಂದ ರಾಜ್ಯಮಟ್ಟದ ಬುಡಕಟ್ಟು ಉತ್ಸವ ಆಚರಿಸಲಾಗುತ್ತಿದೆ ಎಂದರು.

ಈ ಉತ್ಸವದಲ್ಲಿ ಬುಡಕಟ್ಟು ಜನರು ತಯಾರಿಸಿದ ಕರಕುಶಲ ವಸ್ತುಗಳು, ನಾಟಿ ಔಷಧಿಗಳ ಪ್ರದರ್ಶನ ಮತ್ತು ಮಾರಾಟ ಹಾಗೂ ಆಹಾರ ಮೇಳ ನಡೆಯಲಿದೆ. ಎರಡು ದಿನ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ವಿವಿಧ ಬುಡಕಟ್ಟು ಸಮುದಾಯಗಳ ಜೀವನಶೈಲಿ ಕುರಿತಂತೆ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಿಂದ ನಿರ್ಮಿಸಲಾಗಿರುವ ಸಾಕ್ಷ್ಯಚಿತ್ರ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಶ್ರೀರಾಮುಲು ಹೇಳಿದರು.

ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ನಿರ್ದೇಶಕ ಬಸವನಗೌಡ ಮಾತನಾಡಿ, ಪ್ರತಿ ವರ್ಷ ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುದಾನದಲ್ಲಿ ಬುಡಕಟ್ಟು ಉತ್ಸವ ಆಚರಿಸಲಾಗುತ್ತಿದೆ ಎಂದರು.

Share