Connect with us


      




ದೇಶ

12 ವರ್ಷದೊಳಗಿನ ಮಕ್ಕಳಿಗೆ ಟಿಎಸ್ಆರ್‌ಟಿಸಿ ಬಸ್ ಪ್ರಯಾಣ ಉಚಿತ

UNI Kannada

Published

on

ಹೈದರಾಬಾದ್, ಜನವರಿ.2 (ಯು.ಎನ್.ಐ.)  ತೆಲಂಗಾಣ ಸಾರಿಗೆ ಬಸ್‌ಗಳಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಉಚಿತ ಪ್ರಯಾಣ ಸೌಲಭ್ಯ ನೀಡುವ ಬಗ್ಗೆ ಯೋಜಿಸಲಾಗಿದೆ. ತಮ್ಮ ಪೋಷಕರೊಂದಿಗೆ ಪ್ರಯಾಣಿಸುವ ಮಕ್ಕಳಿಗೆ ಈ ಅವಕಾಶವನ್ನು ನೀಡಲಾಗುವುದು ಎಂದು ಟಿಎಸ್‌ಆರ್‌ಟಿಸಿ ಅಧ್ಯಕ್ಷ ಬಾಜಿರೆಡ್ಡಿ ಗೋವರ್ಧನ್ ಹೇಳಿದ್ದಾರೆ.

ಆರ್‌ಟಿಸಿ ಕೇಂದ್ರ ಕಚೇರಿಯ ಬಸ್‌ ಭವನದಲ್ಲಿ ಶನಿವಾರ ನಡೆದ ಹೊಸ ವರ್ಷಾಚರಣೆ ಕಾರ್ಯಕ್ರಮದಲ್ಲಿ ಬಾಜಿರೆಡ್ಡಿ ಮಾತನಾಡಿದ ಅವರು ಆರ್ಥಿಕ ಸಮಸ್ಯೆಗಳನ್ನು ಹಂತಹಂತವಾಗಿ ಪರಿಹರಿಸಿಕೊಂಡು ಆದಾಯ ಹೆಚ್ಚಿಸಿಕೊಳ್ಳುವತ್ತ ಆರ್ ಟಿಸಿ ಗಮನಹರಿಸಿದೆ. ಸಂಕ್ರಾಂತಿ, ಹಬ್ಬದ ವಿಶೇಷ ಬಸ್‌ಗಳಲ್ಲಿ ಸಾಮಾನ್ಯ ದರವನ್ನು ಮಾತ್ರ ವಿಧಿಸಲು ನಿರ್ಧರಿಸಲಾಗಿದೆ.  ಇದರೊಂದಿಗೆ, ನಿರೀಕ್ಷಿತ ಮಟ್ಟದಲ್ಲಿ ಆದಾಯವನ್ನು ಹೆಚ್ಚಿಸಲು ಸಾಧ್ಯವಿದೆ ಎಂದು ಹೇಳಿದರು.

ನಿವೃತ್ತ ನೌಕರರಿಗೆ ಕೂಡಲೇ ಬಾಕಿ ವೇತನ ನೀಡಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಅಧ್ಯಕ್ಷರು ತಿಳಿಸಿದರು. ಕರ್ತವ್ಯದ ವೇಳೆ ಮೃತಪಟ್ಟ ನೌಕರರ ಮಕ್ಕಳಿಗೆ ಅನುಕಂಪದ ನೇಮಕಾತಿ ವಿಚಾರದಲ್ಲಿ ಸರ್ಕಾರದ ಅನುಮೋದನೆ ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದರು. ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಸಿ.ಸಜ್ಜನರ್ ಮಾತನಾಡಿ, ‘ಕಳೆದ ನಾಲ್ಕು ತಿಂಗಳಿಂದ ಆರ್‌ಟಿಸಿ ಪ್ರಗತಿಯ ಪಥದಲ್ಲಿ ಸಾಗುತ್ತಿದೆ. ಇದೇ ಮಾದರಿಯಲ್ಲಿ ಕೆಲಸ ಮಾಡುತ್ತಿರುವ ನೌಕರರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

Share