Connect with us


      




ದೇಶ

ವೈಕುಂಠ ವಾಸ .. ನಮೋ ತಿರುಮಲೇಶಾ !

Published

on

ತಿರುಮಲ, ಜ 13 (ಯುಎನ್‌ ಐ) – ವೈಕುಂಠ ಏಕಾದಶಿ (ಮುಕ್ಕೋಟಿ ಏಕಾದಶಿ) ಅಂಗವಾಗಿ ತಿರುಮಲ ಸುಂದರವಾಗಿ ಕಂಗೊಳಿಸುತ್ತಿದೆ. ಸುಮಾರು 12 ಟನ್‌ಗಳಿಂದ ನಿರ್ಮಿಸಲಾದ ಹೂವಿನ ಕಮಾನುಗಳು, ವಿವಿಧ ಹಣ್ಣುಗಳಿಂಧ ತಿಮ್ಮಪ್ಪನ ದೇವಾಲಯ, ಇತರ ದೇವಾಲಯಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ಅಲಂಕರಿಸಲಾಗಿದೆ. ತಿರುಮಲ ವಿದ್ಯುತ್ ದೀಪಗಳಿಂದ ಝಗಮಗಿಸುತ್ತಿದೆ.

ವೈಕುಂಠ ದ್ವಾರದಿಂದ ತಿಮ್ಮಪ್ಪನನ್ನು ದರ್ಶಿಸಿಕೊಳ್ಳಲು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಎನ್‌ ವಿ ರಮಣ, ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್, ಕರ್ನಾಟಕದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ . ಆಂಧ್ರಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ, ತೆಲಂಗಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ವೈಕುಂಠದ್ವಾರಮೂಲಕ ತಿಮ್ಮಪ್ಪನ ದರ್ಶನಕ್ಕಾಗಿ ತಿರುಮಲಕ್ಕೆ ಆಗಮಿಸಿದ್ದಾರೆ.
ಬುಧವಾರ ಮಧ್ಯ ರಾತ್ರಿ 1.45 ರಿಂದ ದೇಗುಲದ ವೈಕುಂಠ ದ್ವಾರಗಳು (ಉತ್ತರ ದ್ವಾರಗಳು) ತೆರೆದು ಕೊಂಡಿವೆ. ಕೋವಿಡ್ ನಿಯಮಗಳನ್ನು ಅನುಸರಿಸಿ 10 ದಿನಗಳ ಕಾಲ ಉತ್ತರ ದ್ವಾರದಿಂದ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲು ಟಿಟಿಡಿ ನಿರ್ಧರಿಸಿದೆ. ಈ ಭಾಗವಾಗಿ ಗುರುವಾರ ಮುಂಜಾನೆ ಏಕಾಂತ ಧನುರ್ಮಾಸದ ಪೂಜಾ ಕೈಂಕರ್ಯ ನೆರವೇರಿಸಿ ನಂತರ ಭಕ್ತರಿಗೆ ದರ್ಶನ ಅವಕಾಶ ಕಲ್ಪಿಸಿದ್ದಾರೆ. ಬಳಿಕ 9 ರಿಂದ 11 ಗಂಟೆಯೊಳಗೆ ಮಲಯಪ್ಪಸ್ವಾಮಿ ಸಮೇತ ಶ್ರೀದೇವಿ ಮತ್ತು ಭೂದೇವಿಯರನ್ನು ಸ್ವರ್ಣರಥದಲ್ಲಿ ದೇಗುಲದ ಆವರಣದಲ್ಲಿ ಮೆರವಣಿಗೆ ನಡೆಸಲಿದ್ದಾರೆ. ಸಂಜೆ 5ರಿಂದ 7ರವರೆಗೆ ಸಹಸ್ರ ದೀಪಾಲಂಕಾರ ಸೇವೆ ನಡೆಯಲಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಎನ್‌ವಿ ರಮಣ ಅವರು ಬುಧವಾರ ರಾತ್ರಿ ತಿರುಮಲ ತಿಮ್ಮಪ್ಪನನ್ನು ಏಕಾಂತ ಸೇವೆಯ ವೇಳೆ ದರ್ಶನ ಪಡೆದುಕೊಂಡರು.

ದೇಶ

ಪಂಜಾಬ್ ಚುನಾವಣಾ ದಿನಾಂಕ ಮುಂದೂಡಿಕೆ

Published

on

ಚಂಡೀಗಢ: ಜನೆವರಿ 17 (ಯು.ಎನ್.ಐ.) ಪಂಜಾಬ್‌ನಲ್ಲಿ ಫೆಬ್ರವರಿ 20ರಂದು ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಇಂದು ತಿಳಿಸಿದೆ. ಗುರು ರವಿದಾಸ್ ಜಯಂತಿ ಆಚರಣೆಗೆ ಅನುಕೂಲ ಮಾಡಿಕೊಡುವಂತೆ ರಾಜಕೀಯ ಪಕ್ಷಗಳು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ ನಂತರ ಫೆಬ್ರವರಿ 14ರಂದು ನಿಗದಿಯಾಗಿದ್ದ ದಿನಾಂಕವನ್ನು ಬದಲಾವಣೆ ಮಾಡಲಾಗಿದೆ.
ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರು ಚುನಾವಣಾ ಆಯೋಗಕ್ಕೆ ಬರೆದ ಪತ್ರದಲ್ಲಿ “ಪಂಜಾಬ್‌ನ ಜನಸಂಖ್ಯೆಯ ಶೇಕಡಾ 32ರಷ್ಟು ಪರಿಶಿಷ್ಟ ಜಾತಿಗಳ ಸಮುದಾಯದ ಪ್ರತಿನಿಧಿಗಳು ತಮ್ಮನ್ನು ಭೇಟಿ ಮಾಡಿದ್ದರು. ಗುರು ರವಿದಾಸ್ ಅವರ ಜನ್ಮದಿನದ ಅಂಗವಾಗಿ ಫೆಬ್ರವರಿ 10ರಿಂದ 16ರವರೆಗೆ ಉತ್ತರ ಪ್ರದೇಶದ ವಾರಣಾಸಿಗೆ ಭೇಟಿ ನೀಡುತ್ತೇವೆ. ಹೀಗಾಗಿ ತಮಗೆ ವೋಟ್ ಮಾಡಲು ಸಾಧ್ಯವಾಗುವುದಿಲ್ಲ ಎಂದು ಮನವಿ ಮಾಡಿದ್ದರು. ಹೀಗಾಗಿ ಚುನಾವಣಾ ಆಯೋಗ ಪೂರ್ವ ನಿಗದಿ ಮಾಡಿದ್ದ ಫೆಬ್ರವರಿ 14ರ ಚುನಾವಣೆಯನ್ನು 6 ದಿನಗಳ ಕಾಲ ಮುಂದೂಡಬೇಕಂದು” ಸಿಎಂ ಚನ್ನಿ ಮನವಿ ಮಾಡಿದ್ದರು.
ಪಂಜಾಬ್ ರಾಜಕೀಯ ಪಕ್ಷಗಳ ಮನವಿಯ ಮೇರೆಗೆ ಇಂದು ಚುನಾವಣಾ ಆಯೋಗ ಸಭೆ ನಡೆಸಿತ್ತು. ಸಭೆ ಬಳಿಕ ಮಾಹಿತಿ ನೀಡಿದ ಚುನಾವಣಾ ಅಧಿಕಾರಿಗಳು, “ಪಂಜಾಬ್ ಸರ್ಕಾರ ಮತ್ತು ಇತರ ಸಂಘಟನೆಗಳು ಚುನಾವಣೆಯನ್ನು ಮುಂದೂಡುವಂತೆ ಕೋರಿದ್ದವು.” ಗುರು ರವಿದಾಸ್ ಜನ್ಮದಿನದ ಅಂಗವಾಗಿ ಹೆಚ್ಚಿನ ಭಕ್ತರು ವಾರಣಾಸಿಗೆ ಭೇಟಿ ನೀಡುತ್ತಾರೆ. ಫೆಬ್ರವರಿ 14ರಂದು ಮತದಾನದ ದಿನವನ್ನು ಇಟ್ಟುಕೊಳ್ಳುವುದರಿಂದ ಹೆಚ್ಚಿನ ಸಂಖ್ಯೆಯ ಮತದಾರರು ಮತದಾನದಿಂದ ವಂಚಿತರಾಗುತ್ತಾರೆ” ಎಂದು ಗಮನಕ್ಕೆ ತಂದಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿತು.
ರಾಜಕೀಯ ಪಕ್ಷಗಳು ಹಾಗೂ ಪಂಜಾಬ್ ಸರ್ಕಾರದ ಮನವಿ ಮೇರೆಗೆ ಚುನಾವಣೆ ದಿನಾಂಕವನ್ನು ಫೆಬ್ರವರಿ 14ರ ಬದಲಾಗಿ ಫೆಬ್ರವರಿ 20ರಂದು ನಡೆಸಲು ನಿರ್ಧರಿಸಲಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.

Continue Reading

ದೇಶ

ದೇಶವನ್ನು ಕೊರೋನಾ ಮುಕ್ತಗೊಳಿಸಲು ಪಣ ತೊಡೋಣ; ಕೇಜ್ರಿವಾಲ್

Published

on

ನವದೆಹಲಿ: ಜನೆವರಿ 17 (ಯು.ಎನ್.ಐ.) ಸಾಂಕ್ರಾಮಿಕ ರೋಗವಾದ ಕೋವಿಡ್ -೧೯ ಪರಿಸ್ಥಿತಿಯನ್ನು ಆಪಾದನೆ ಮಾಡುತ್ತಾ ಕುಳಿತುಕೊಂಡರೆ ಯಾವುದೇ ಪ್ರಯೋಜನವಿಲ್ಲ. ಇಡೀ ದೇಶದಿಂದ ತೊಡೆದುಹಾಕು ಪಣ ತೊಡಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಿವಿಮಾತು ಹೇಳಿದರು.

ದೆಹಲಿಯಲ್ಲಿ ಹೆಚ್ಚುತ್ತಿರುವ ಕೊರೊನಾವೈರಸ್ ಪ್ರಕರಣಗಳು NCR (ರಾಷ್ಟ್ರೀಯ ರಾಜಧಾನಿ ಪ್ರದೇಶ) ಮೇಲೆ ಪರಿಣಾಮ ಬೀರಿದೆ ಮತ್ತು ಗುರುಗ್ರಾಮ್, ಫರಿದಾಬಾದ್ ಮತ್ತು ಸೋನಿಪತ್ ಜಿಲ್ಲೆಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿದೆ” ಎಂದು ಹೇಳಿದ ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದರು.

ನಾನು ಕೊರೋನಾ ಸಂಕಷ್ಟದ ಪರಿಸ್ಥಿತಿಯನ್ನು ತೆಗಳುತ್ತಾ ಕೂರುವುದಿಲ್ಲ. ಆಪಾದನೆ ರೋಗವನ್ನು ತೊಲಗಿಸುವುದಿಲ್ಲ. ದೇಶದಲ್ಲಿ ಕೊರೋನಾ ವೈರಸ್ ಎಲ್ಲಿದ್ದರೂ ನಿವಾರಿಸಲು ಪ್ರಯತ್ನಿಸಿಸಬೇಕು ಎಂದು ಹೇಳಿದರು.

ದೆಹಲಿಯಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ ಮತ್ತು ಸೋಮವಾರ ಸುಮಾರು 12,000-13,000 ಹೊಸ ಪ್ರಕರಣಗಳು ದಾಖಲಾಗಿವೆ. ಭಾನುವಾರದಂದು 18,000ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಅವರು ಹೇಳಿದರು.

ಪಂಜಾಬ್ ಮುಕ್ಯಮಂತ್ರಿ ಅಭ್ಯರ್ಥಿ ಘೋಷಣೆ ನಾಳೆ

ಅರವಿಂದ್ ಕೇಜ್ರಿವಾಲ್ ಅವರು ಪಂಜಾಬಿನ ಆಮ್‌ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ನಾಳೆ (ಮಂಗಳವಾರ ಜನೆವರಿ ೧೮) ಘೋಷಿಸಲಾಗುವುದು ಎಂದು ತಿಳಿಸಿದರು.

Continue Reading

ದೇಶ

ಮೂವರು ಪಿಎಲ್ ಎಫ್ ಐ ಸಂಘಟನೆ ನಕ್ಸಲರ ಬಂಧನ

Published

on

ಖುಂಟಿ: ಜನೆವರಿ 17 (ಯು.ಎನ್.ಐ.) ನಿಷೇಧಿತ ಪೀಪಲ್ಸ್ ಲಿಬರೇಶನ್ ಫ್ರಂಟ್ ಆಫ್ ಇಂಡಿಯಾ (ಪಿಎಲ್ ಎಫ್‌ಐ) ಸಂಘಟನೆಗೆ ಸೇರಿದ 14 ವರ್ಷದ ಅಪ್ರಾಪ್ತ ಸೇರಿದಂತೆ ಮೂವರು ಮೂವರು ನಕ್ಸಲರನ್ನು ಜಾರ್ಖಂಡ್ ಖುಂಟಿ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಸುಳಿವಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಭಾನುವಾರ ರಾನಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ರಂಗೋಡಿ ಗ್ರಾಮದಲ್ಲಿ ಮೂವರನ್ನು ಬಂಧಿಸಿದ್ದಾರೆ.

ವಿಶ್ರಮ್ ಕೊಂಗಾಡಿ ಮತ್ತು ಕುಲೇನ್ ಕೊಂಗಾಡಿ ಎಂದು ಗುರುತಿಸಲಾಗಿದೆ. ಇವರು ಕ್ರಮವಾಗಿ ಏಳು ಮತ್ತು ಐದು ವಿಭಿನ್ನ ಕ್ರಿಮಿನಲ್ ಪ್ರಕರಣಗಳಲ್ಲಿ ಇವರ ಹೆಸರು ಕೇಳಿಬಂದಿದೆ ಎಂದು ಪೊಲೀಸ್ ಅಧೀಕ್ಷಕ ಅಶುತೋಷ್ ಶೇಖರ್ ಹೇಳಿದ್ದಾರೆ.

ಬಂಧಿತರ ಬಳಿ ಇದ್ದ ಹಲವಾರು ಕಾಟ್ರಿಡ್ಜ್ ಗಳು, ಪಿಎಲ್ ‌ಎಫ್‌ಐ ಕರಪತ್ರಗಳು ಮತ್ತು ದೇಣಿಗೆ ರಶೀದಿಗಳು ಮತ್ತು ಮೊಬೈಲ್ ಫೋನ್‌ಗಳು ಮತ್ತು ಮೋಟಾರ್‌ಸೈಕಲ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

Continue Reading
Advertisement
ಕರ್ನಾಟಕ8 mins ago

ಬೆಂಗಳೂರಲ್ಲಿ ಆತಂಕ ಹೆಚ್ಚಿಸಿದ ಒಮೈಕ್ರಾನ್!

ಬೆಂಗಳೂರು: ಜನೆವರಿ 17 (ಯು.ಎನ್.ಐ) ರಾಜಧಾನಿ ಬೆಂಗಳೂರಲ್ಲಿ ಒಂದೇ ದಿನ ಬರೋಬ್ಬರಿ 287 ಒಮೈಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯ ಸರ್ಕಾರ ತೀವ್ರ ನಿಗಾದ ಮಧ್ಯೆಯೇ ಒಮೈಕ್ರಾನ್ ಪ್ರಕರಣಗಳು...

ದೇಶ21 mins ago

ಪಂಜಾಬ್ ಚುನಾವಣಾ ದಿನಾಂಕ ಮುಂದೂಡಿಕೆ

ಚಂಡೀಗಢ: ಜನೆವರಿ 17 (ಯು.ಎನ್.ಐ.) ಪಂಜಾಬ್‌ನಲ್ಲಿ ಫೆಬ್ರವರಿ 20ರಂದು ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಇಂದು ತಿಳಿಸಿದೆ. ಗುರು ರವಿದಾಸ್ ಜಯಂತಿ ಆಚರಣೆಗೆ ಅನುಕೂಲ...

ದೇಶ22 mins ago

ದೇಶವನ್ನು ಕೊರೋನಾ ಮುಕ್ತಗೊಳಿಸಲು ಪಣ ತೊಡೋಣ; ಕೇಜ್ರಿವಾಲ್

ನವದೆಹಲಿ: ಜನೆವರಿ 17 (ಯು.ಎನ್.ಐ.) ಸಾಂಕ್ರಾಮಿಕ ರೋಗವಾದ ಕೋವಿಡ್ -೧೯ ಪರಿಸ್ಥಿತಿಯನ್ನು ಆಪಾದನೆ ಮಾಡುತ್ತಾ ಕುಳಿತುಕೊಂಡರೆ ಯಾವುದೇ ಪ್ರಯೋಜನವಿಲ್ಲ. ಇಡೀ ದೇಶದಿಂದ ತೊಡೆದುಹಾಕು ಪಣ ತೊಡಬೇಕು ಎಂದು...

ಸಿನೆಮಾ39 mins ago

ಹಿಂದಿಯಲ್ಲಿ ತೆರೆ ಕಾಣುತ್ತಿದೆ ಅಲ್ಲು ಅರ್ಜುನ್‌ ಅಭಿನಯದ ‘ಅಲಾ ವೈಕುಂಠಪುರಮುಲು’

ಹೈದರಾಬಾದ್: ಜನೆವರಿ 17 (ಯು.ಎನ್.ಐ.) ಇದೀಗ ಟಾಲಿವುಡ್ ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಪುಷ್ಪ ದಿ ರೈಸ್ ಸಿನಿಮಾದ ಯಶಸ್ಸಿನಲ್ಲಿದ್ದಾರೆ. ಮತ್ತೊಂದು ಸಂತೋಷದ ವಿಚಾರವೆಂದರೆ ಅಲ್ಲು ಅರ್ಜುನ್‌...

ದೇಶ55 mins ago

ಮೂವರು ಪಿಎಲ್ ಎಫ್ ಐ ಸಂಘಟನೆ ನಕ್ಸಲರ ಬಂಧನ

ಖುಂಟಿ: ಜನೆವರಿ 17 (ಯು.ಎನ್.ಐ.) ನಿಷೇಧಿತ ಪೀಪಲ್ಸ್ ಲಿಬರೇಶನ್ ಫ್ರಂಟ್ ಆಫ್ ಇಂಡಿಯಾ (ಪಿಎಲ್ ಎಫ್‌ಐ) ಸಂಘಟನೆಗೆ ಸೇರಿದ 14 ವರ್ಷದ ಅಪ್ರಾಪ್ತ ಸೇರಿದಂತೆ ಮೂವರು ಮೂವರು...

ದೇಶ59 mins ago

ಪದ್ಮಶ್ರೀ ಪುರಸ್ಕೃತೆ, ಸಾಮಾಜಿಕ ಕಾರ್ಯಕರ್ತೆ ಶಾಂತಿ ದೇವಿ ನಿಧನ: ಮೋದಿ ಸಂತಾಪ

ರಾಯಗಡ: ಜನೆವರಿ ೧೭ (ಯು.ಎನ್.ಐ.) ಪದ್ಮಶ್ರೀ ಪುರಸ್ಕೃತೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಶಾಂತಿ ದೇವಿ ಭಾನುವಾರ ರಾತ್ರಿ ಒಡಿಶಾದ ರಾಯಗಡ ಜಿಲ್ಲೆಯ ಗುಣಪುರದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ....

ಕರ್ನಾಟಕ1 hour ago

ಪಿಎಂಎಫ್ಎಂಇ ಯೋಜನೆಗೆ ಶೇ.15 ರಷ್ಟು ರಾಜ್ಯದಿಂದ ಹೆಚ್ಚುವರಿ ಸಹಾಯಧನ

ಬೆಂಗಳೂರು: ಜನೆವರಿ 17 (ಯು.ಎನ್.ಐ.)ರೈತರಿಗೆ ಬಲತುಂಬಲು ರಾಜ್ಯ ಸರ್ಕಾರ ಕೇಂದ್ರದ ಆತ್ಮ ನಿರ್ಭರ ಭಾರತ ಅಭಿಯಾನ (ಪಿಎಂಎಫ್ಎಂಇ) ಯೋಜನೆಗೆ ಸಹಾಯಧನವನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ. ಪಿಎಂಎಫ್ಎಂಇ ಯೋಜನೆಗೆ...

ಬೆಂಗಳೂರು1 hour ago

ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಗೆ ಕೋವಿಡ್

ಬೆಂಗಳೂರು, ಜ ೧೭(ಯುಎನ್ ಐ) ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಕಳೆದ ನಾಲ್ಕೈದು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆಆರ್ ಟಿ...

ದೇಶ2 hours ago

ಉಪಯುಕ್ತ ಮಾಹಿತಿ ; 5 ಸಾವಿರ ಅಲ್ಲ, ಕೇವಲ ₹260 ರಲ್ಲಿ ಒಮೈಕ್ರಾನ್ ಪತ್ತೆ ಹಚ್ಚಿ!

ಬೆಂಗಳೂರು : ಜನೆವರಿ 17 (ಯು.ಎನ್.ಐ.) ಪ್ರತಿ ದಿನ ಒಮೈಕ್ರಾನ್ ಸೋಂಕು ದೇಶದಲ್ಲಿ ವೇಗವಾಗಿ ಹರಡಲಾರಂಭಿಸಿದೆ. ಕೊರೊನಾ ರೂಪಾಂತರಗಳಿಗಿಂತ ಒಮೈಕ್ರಾನ್ ಹೆಚ್ಚು ಸಾಂಕ್ರಾಮಿಕವಾಗಿದ್ದು, ಜೀನೋಮ್ ಸೀಕ್ವೆನ್ಸಿಂಗ್ ಟೆಸ್ಟ್‌ನೊಂದಿಗೆ...

ದೇಶ2 hours ago

ಐಐಟಿ ಬಾಂಬೆಯ ವಿದ್ಯಾರ್ಥಿ ಆತ್ಮಹತ್ಯೆ

ಮುಂಬೈ: ಜನೆವರಿ 17  (ಯು.ಎನ್.ಐ.) ಐಐಟಿ ಬಾಂಬೆಯ ವಿದ್ಯಾರ್ಥಿ ಸೋಮವಾರ ಮುಂಜಾನೆ ಇಲ್ಲಿನ ಪೊವೈ ಕ್ಯಾಂಪಸ್ ನಲ್ಲಿರುವ ತನ್ನ ಹಾಸ್ಟೆಲಿನ ಟೆರೇಸ್‌ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ...

ಟ್ರೆಂಡಿಂಗ್

Share