Connect with us


      
ದೇಶ

ತೆಲಂಗಾಣದಲ್ಲಿ 2 ಒಮಿಕ್ರಾನ್ ಪ್ರಕರಣ ಪತ್ತೆ: ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 64ಕ್ಕೆ ಏರಿಕೆ

Bindushree Hosuru

Published

on

ಹೈದರಾಬಾದ್: ಡಿ. 15 (ಯು.ಎನ್.ಐ)​​​ ತೆಲಂಗಾಣದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ ಎಂದು ರಾಜ್ಯವು ಡಿ. 15 ರಂದು ಮಾಹಿತಿ ನೀಡಿದೆ. ಈ ಮಧ್ಯೆ ಪಶ್ಚಿಮ ಬಂಗಾಳ ತನ್ನ ಮೊದಲ ಪ್ರಕರಣವನ್ನು ಪತ್ತೆ ಮಾಡಿದ್ದು, ಈ ಮೂಲಕ ಭಾರತದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 64ಕ್ಕೆ ಏರಿಕೆಯಾಗಿದೆ.

ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಮಾಡಲಾದ ಕೊರೊನಾ ಪರೀಕ್ಷೆಯಲ್ಲಿ ಮೂರು ಪ್ರಕರಣಗಳು ಪತ್ತೆಯಾಗಿವೆ. ಇದರಲ್ಲಿ ಓರ್ವ ಏಳು ವರ್ಷದ ಬಾಲಕ ಪಶ್ಚಿಮ ಬಂಗಾಳಕ್ಕೆ ತೆರಳಿದ್ದಾನೆ. ತೆಲಂಗಾಣ ಸರ್ಕಾರವು ಪಶ್ಚಿಮ ಬಂಗಾಳ ಸರ್ಕಾರವನ್ನು ಎಚ್ಚರಿಸಿದೆ ಎಂದು ರಾಜ್ಯ ಸಾರ್ವಜನಿಕ ಆರೋಗ್ಯ ನಿರ್ದೇಶಕ ಡಾ. ಜಿ. ಶ್ರೀನಿವಾಸ ರಾವ್ ಹೇಳಿದ್ದಾರೆ.

ಭಾನುವಾರ ಹೈದರಾಬಾದ್‌ಗೆ ಆಗಮಿಸಿದ್ದ ಮೂವರನ್ನು ಮಂಗಳವಾರ ಒಮಿಕ್ರಾನ್ ರೂಪಾಂತರದ ಪರೀಕ್ಷೆಗೆ ಒಳಪಡಿಸಲಾಗಿದೆ. ಈ ನಡುವೆ ಮಹಾರಾಷ್ಟ್ರದಲ್ಲಿ ಎಂಟು ರೋಗಿಗಳಲ್ಲಿ ಮಂಗಳವಾರ ಈ ರೂಪಾಂತರಿ ಪತ್ತೆಯಾಗಿದೆ. ಅದರಲ್ಲಿ ಏಳು ಮಂದಿ ಮುಂಬೈನಲ್ಲಿದ್ದಾರೆ. ಇಬ್ಬರು ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇತರರು ಮನೆಯಲ್ಲಿ ಪ್ರತ್ಯೇಕವಾಗಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಮಂಗಳವಾರ ಪತ್ತೆಯಾದ ಎಂಟು ಹೊಸ ಪ್ರಕರಣಗಳಲ್ಲಿ ಏಳು ಮಂದಿಗೆ ಲಸಿಕೆ ನೀಡಲಾಗಿದ್ದು, ಅವರಲ್ಲಿ ಯಾರೂ ಅಂತಾರಾಷ್ಟ್ರೀಯ ಪ್ರಯಾಣದ ಇತಿಹಾಸವನ್ನು ಹೊಂದಿಲ್ಲ.

ಇದಲ್ಲದೆ ಮಂಗಳವಾರ ದೆಹಲಿಯಲ್ಲಿ ನಾಲ್ಕು ಹೊಸ ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆಯನ್ನು ಆರಕ್ಕೆ ಏರಿಕೆಯಾಗಿದೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಹೇಳಿದ್ದಾರೆ.

ಆರು ಪ್ರಕರಣಗಳಲ್ಲಿ ಒಬ್ಬ ರೋಗಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಜೈನ್ ಹೇಳಿದರು.

ರಾಜಸ್ಥಾನದಲ್ಲಿ ಇನ್ನೂ ನಾಲ್ಕು ಪ್ರಕರಣಗಳು ವರದಿಯಾಗಿವೆ ಎಂದು ರಾಜ್ಯ ಆರೋಗ್ಯ ಸಚಿವ ಪರ್ಸಾದಿ ಲಾಲ್ ಮೀನಾ ಅವರು ತಿಳಿಸಿದ್ದಾರೆ.

Share