Connect with us


      




ದೇಶ

2022-23ನೇ ಸಾಲಿನ ಕೇಂದ್ರ ಬಜೆಟ್: ಮಾನಸಿಕ ಆರೋಗ್ಯಕ್ಕಾಗಿ ರಾಷ್ಟ್ರೀಯ ಟೆಲಿ ಮೆಂಟಲ್ ಹೆಲ್ತ್ ಕಾರ್ಯಕ್ರಮ

Vanitha Jain

Published

on

ನವದೆಹಲಿ: ಫೆಬ್ರವರಿ 01 (ಯು.ಎನ್.ಐ.) ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಲೋಕಸಭೆಯಲ್ಲಿ 2022-23ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಮಂಡಿಸಿದರು.

1 ಗಂಟೆ 33 ನಿಮಿಷಗಳ ಕಾಲ 39.4 ಲಕ್ಷ ಕೋಟಿ ವೆಚ್ಚದ ಬಜೆಟ್ ಮಂಡಿಸಿದರು. ಕೊರೋನಾ ಸಂದರ್ಭಲ್ಲಿ ದೈಹಿಕ ಆರೋಗ್ಯದ ಜೊತೆಗೆ ನಸಿಕ ಆರೋಗ್ಯದ ಕಡೆಗೂ ಹೆಚ್ಚು ಒತ್ತು ನೀಡುವುದು ಅಗತ್ಯ ಎಂದು ಭಾವಿಸಿದ ಅವರು ಮಾನಸಿಕ ಆರೋಗ್ಯಕ್ಕಾಗಿ ಕಾರ್ಯಕ್ರಮ ಪ್ರಾರಂಭಿಸಲಾಗುವುದು ಎಂದು ಘೋಷಿಸಿದ್ದಾರೆ. ಅದುವೇ ರಾಷ್ಟ್ರೀಯ ಟೆಲಿ ಮೆಂಟಲ್ ಹೆಲ್ತ್ ಕಾರ್ಯಕ್ರಮ.

ಗುಣಮಟ್ಟದ ಮಾನಸಿಕ ಆರೋಗ್ಯ ಸಮಾಲೋಚನೆ ಮತ್ತು ಆರೈಕೆ ಸೇವೆಗಳನ್ನು ಉತ್ತಮಗೊಳಿಸುವ ಸಲುವಾಗಿ, ರಾಷ್ಟ್ರೀಯ ಟೆಲಿ ಮೆಂಟಲ್ ಹೆಲ್ತ್ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು. ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ಅನ್ನು ನೋಡಲ್ ಕೇಂದ್ರವಾಗಿಸಿ 23 ಟೆಲಿ-ಮೆಂಟಲ್ ಆರೋಗ್ಯ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದು ಹೇಳಿದರು.

Share