Connect with us


      




ಕರ್ನಾಟಕ

ಕೊಲ್ಲೂರು ಮುಕಾಂಬಿಕೆಗೆ ನಿರ್ಮಲಾ ನಮನ

Kumara Raitha

Published

on

ಉಡುಪಿ: ಮೇ ೧೪ ( ಎರಡು ದಿನಗಳ ಭೇಟಿಗಾಗಿ ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಬೆಳಗ್ಗೆ ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಅವರನ್ನು ಆಡಳಿತ ಮಂಡಳಿ ಪೂರ್ಣ ಕುಂಭದೊಂದಿಗೆ ಸ್ವಾಗತಿಸಿತು.  ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾದ ಗೋವಿಂದ ಅಡಿಗ, ನರಸಿಂಹ ಅಡಿಗರ ಉಸ್ತುವಾರಿಯಲ್ಲಿ ದೇವಿಗೆ ಆಯೋಜಿತವಾಗಿದ್ದ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ನಮನ ಸಲ್ಲಿಸಿದರು.  ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಅವರು ಸಹ ಇದ್ದರು. ಅವರಿಂದು ಮುಂಜಾನೆ ಉಡುಪಿಯ ಶ್ರೀಕೃಷ್ಣ ದೇಗುಲಕ್ಕೆ ಭೇಟನಿ ನೀಡಿ ದರ್ಶನ ಪಡೆದಿದ್ದರು.

ಇಂದು ಮಧ್ಯಾಹ್ನ ೨.೩೦ಕ್ಕೆ ಉಡುಪಿ ಕುಕ್ಕಿಕಟ್ಟೆಯಲ್ಲಿರುವ ಶ್ರೀಕೃಷ್ಣ ಬಾಲನಿಕೇತನದಲ್ಲಿ ವಿಸ್ತರಿತ ನೂತನ ಕಟ್ಟಡ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ ೪ಗಂಟೆಗೆ ಟಿ.ಎ. ಪೈ ಮ್ಯಾನೇಜ್‌ಮೆಂಟ್‌ ಸಂಸ್ಥೆಯ ವಾರ್ಷಿಕ ಘಟಿಕೋತ್ಸವದಲ್ಲಿ ಭಾಗಿಯಾಗಲಿದ್ದಾರೆ.

ಭಾನುವಾರ ಬೆಂಗಳೂರಿನಲ್ಲಿ ಆಯೋಜಿತವಾಗಿರುವ ಎರಡು ಕಾರ್ಯಕ್ರಮಗಳಲ್ಲಿ ನಿರ್ಮಲಾ ಸೀತಾರಾಮನ್‌ ಭಾಗಿಯಾಗಲಿದ್ದಾರೆ.

Share