Published
6 months agoon
ಬೆಂಗಳೂರು: ನ. 8 (ಯುಎನ್ಐ) ಕೇಂದ್ರ ಪಂಚಾಯತ್ ರಾಜ್ ಸಚಿವ ಕಪಿಲ್ ಮೊರೇಶ್ವರ ಪಾಟೀಲ್ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ದೊಡ್ಡಜಾಲ ಮತ್ತು ರಾಜಾನುಕುಂಟೆ ಪಂಚಾಯತಿಗಳಿಗೆ ತಾವು ಇಂದು ಭೇಟಿ ನೀಡಿದ್ದು, ಗ್ರಾಮೀಣ ಭಾಗದಲ್ಲಿ ಆಸ್ತಿ ಸೃಜನೆಗೆ ಹಾಗೂ ಗ್ರಾಮೀಣ ಆರ್ಥಿಕತೆಗೆ ಮಹತ್ವ ನೀಡಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಡಿಜಿಟಲ್ ಗ್ರಂಥಾಲಯಗಳಿಗೂ ಭೇಟಿ ನೀಡಿದ್ದಾಗಿ ತಿಳಿಸಿದ ಸಚಿವರು, ಭಾರತ್ ನೆಟ್ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಅಂತರ್ಜಾಲ ವ್ಯವಸ್ಥೆ ಉತ್ತಮಗೊಳಿಸುವಂತೆ ಸಲಹೆ ನೀಡಿದರು.
ಇದಕ್ಕೆ ಈಗಾಗಲೇ ರಾಜ್ಯದ 5960 ಗ್ರಾಮ ಪಂಚಾಯಿತಿಗಳಿಗೂ ಅಂತರ್ಜಾಲ ವ್ಯವಸ್ಥೆ ಕಲ್ಪಿಸಲಾಗಿದ್ದು, ಕಟ್ಟ ಕಡೆಯ ವ್ಯಕ್ತಿಯೂ ಅಂತರ್ಜಾಲ ಸೌಲಭ್ಯ ಕಲ್ಪಿಸುವ ಪ್ರಯತ್ನ ಜಾರಿಯಲ್ಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಅಮೃತ ಯೋಜನೆಯಡಿ 7500 ಸ್ತ್ರೀ ಶಕ್ತಿ ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ1 ಲಕ್ಷ ರೂ.ಗಳ ಅನುದಾನ ನೀಡುವ ಯೋಜನೆಯನ್ನು ಘೋಷಿಸಲಾಗಿದೆ ಎಂದು ತಿಳಿಸಿದರು.
ಕರ್ನಾಟಕದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆ ಸದೃಢವಾಗಿದ್ದು, ಅದನ್ನು ಇನ್ನಷ್ಟು ಬಲಪಡಿಸಲು ಆರ್ಥಿಕ ನೆರವು ಅಗತ್ಯವೆಂದ ಮುಖ್ಯಮಂತ್ರಿಗಳು, ಪಂಚಾಯತಿಗಳಲ್ಲಿ ಆರ್ಥಿಕತೆಯ ವಿಕೇಂದ್ರೀಕರಣವೂ ಆಗಬೇಕು.
ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಶಾಲಾ ಕಟ್ಟಡಗಳಿಗೆ ಅನುದಾನ ದೊರೆತರೆ ಆಸ್ತಿ ಸೃಜನೆಗೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.
ಸಿಎಂ ಬದಲಾವಣೆಯಿಲ್ಲ: ಅಮಿತ್ ಶಾ ಸಂದೇಶ
ಶೀಘ್ರವೇ ನನ್ನನ್ನು ಸಿಎಂ ಮಾಡಿ: ಸೋನಿಯಾ ಬಳಿ ಸಚಿನ್ ಪೈಲಟ್ ಮನವಿ
ಏ.27 ರಂದು ಎಲ್ಲಾ ರಾಜ್ಯದ ಸಿಎಂಗಳ ಜೊತೆ ಪ್ರಧಾನಿ ಮೋದಿ ಸಭೆ
ಕೋವಿಡ್ನಿಂದ ಅನಾಥರಾದ ಮಕ್ಕಳ ಆರೋಗ್ಯ ಮತ್ತು ಶಿಕ್ಷಣ ಸರ್ಕಾರದ ಜವಾಬ್ದಾರಿ : ಸಿಎಂ
ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಸಮಿತಿ ರಚನೆ: ಸಿಎಂ
ಮುಂದಿನ ದಿನಗಳಲ್ಲಿ ಕೋವಿಡ್ ಸಮಸ್ಯೆಯನ್ನು ಎದುರಿಸಲು ಸರ್ಕಾರ ಸನ್ನದ್ಧವಾಗಿದೆ: ಸಿಎಂ