Connect with us


      




ದೇಶ

ಉತ್ತರ ಪ್ರದೇಶ: ವಿಧಾನ ಪರಿಷತ್ತಿನ ಸದಸ್ಯತ್ವಕ್ಕೆ ಯೋಗಿ ರಾಜೀನಾಮೆ

Vanitha Jain

Published

on

ಲಕ್ನೋ: ಮಾರ್ಚ್ 22 (ಯು.ಎನ್.ಐ.) ಉತ್ತರ ಪ್ರದೇಶದ ನಿಯೋಜಿತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಂಗಳವಾರ ರಾಜ್ಯ ವಿಧಾನ ಪರಿಷತ್ತಿನ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಸೋಮವಾರ ಸಂಜೆ ಯೋಗಿ ಆದಿತ್ಯನಾಥ್ ಅವರು ತಮ್ಮ ರಾಜೀನಾಮೆ ಪತ್ರವನ್ನು ವಿಧಾನ ಪರಿಷತ್ ಸಭಾಪತಿಗೆ ಕಳುಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಗೋರಖ್ ಪುರದಿಂದ ಸತತ ಐದು ಬಾರಿ ಸಂಸದರಾಗಿರುವ ಯೋಗಿ ಆದಿತ್ಯನಾಥ್, ರಾಜ್ಯದಲ್ಲಿ ಈಗಷ್ಟೇ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಗೋರಖ್ ಪುರ (ನಗರ) ವಿಧಾನಸಭಾ ಕ್ಷೇತ್ರದಿಂದ ಮೊದಲ ಬಾರಿಗೆ ಆಯ್ಕೆಯಾಗಿದ್ದಾರೆ.

ಯೋಗಿ ಆದಿತ್ಯನಾಥ್ ಸಿಎಂ ಆದ ನಂತರ ಸೆಪ್ಟೆಂಬರ್ 8, 2017 ರಂದು ರಾಜ್ಯ ವಿಧಾನ ಪರಿಷತ್ತಿಗೆ ಆಯ್ಕೆಯಾದರು.

Share