Published
7 months agoon
By
Vanitha Jainಲಕ್ನೋ: ಜನೆವರಿ 08 (ಯು.ಎನ್.ಐ.) ಮುಂಬರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿ ಪ್ರಕಟವಾದ ನಂತರ ಸಮಾಜವಾದಿ ಪಕ್ಷದ (ಎಸ್ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಉತ್ತರಪ್ರದೇಶ ವಿಧಾನ ಸಭಾ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ
ಲಕ್ನೋದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಉತ್ತರ ಪ್ರದೇಶದ ಜನರು ಈ ಚುನಾವಣೆ ಮೂಲಕ ಬಿಜೆಪಿ ಸರಕಾರಕ್ಕೆ ವಿದಾಯ ಹೇಳಲು ಸಿದ್ಧರಾಗಿದ್ದಾರೆ ಎಂದು ಹೇಳಿದ್ದಾರೆ
ಚುನಾವಣಾ ನಿಯಮಗಳನ್ನು ತಮ್ಮ ಪಕ್ಷವು ಅನುಸರಿಸುತ್ತದೆ ಆದರೆ ಆಡಳಿತ ಪಕ್ಷವು ಸಹ ಈ ಮಾರ್ಗಸೂಚಿಗಳನ್ನು ಅನುಸರಿಸುತ್ತದೆಯೇ ಎಂಬುದನ್ನು ಚುನಾವಣಾ ಆಯೋಗ ಖಾತರಿಪಡಿಸಿಕೊಳ್ಳಬೇಕು ಎಂದು ಹೇಳಿದರು.
“ಉತ್ತರ ಪ್ರದೇಶದ ಜನರು ಬಿಜೆಪಿ ಸರ್ಕಾರಕ್ಕೆ ವಿದಾಯ ಹೇಳಲು ಸಿದ್ಧರಾಗಿದ್ದಾರೆ. ಈ ದಿನಾಂಕಗಳು ರಾಜ್ಯದಲ್ಲಿ ಭಾರಿ ಬದಲಾವಣೆಯನ್ನು ಸೂಚಿಸುತ್ತವೆ. ಮಾರ್ಚ್ 10 ರೊಳಗೆ ನಿರ್ಧಾರ ತೆಗೆದುಕೊಳ್ಳಲು ಸಾರ್ವಜನಿಕರಿಗೆ ಅವಕಾಶವಿದೆ. ಸಮಾಜವಾದಿ ಪಕ್ಷವು ನಿಯಮಗಳನ್ನು ಅನುಸರಿಸುತ್ತದೆ, ಆದರೆ ಚುನಾವಣಾ ಆಯೋಗವು ಆಡಳಿತ ಪಕ್ಷ ಬಿಜೆಪಿಯು ಈ ಮಾರ್ಗಸೂಚಿಗಳನ್ನು ಅನುಸರಿಸುತ್ತದೆಯೇ ಎಂಬುದನ್ನು ತಿಳಿದುಕೊಳ್ಳಬೇಕು” ಎಂದು ಹೇಳಿದರು.
ಮಾರ್ಚ್ 10 ರಂದು ಇಂಕ್ವಿಲಾಬ್ (ಕ್ರಾಂತಿ) ಸಂಭವಿಸುತ್ತದೆ ಮತ್ತು ಉತ್ತರ ಪ್ರದೇಶ ರಾಜ್ಯವು ಬದಲಾಗುತ್ತದೆ ಎಂದು ಅವರು ಟ್ವಿಟರ್ನಲ್ಲಿ ತಿಳಿಸಿದ್ದಾರೆ.
ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದ ಯುವಕರಿಗೆ ಉಚಿತ ಲ್ಯಾಪ್ಟಾಪ್, ಉಚಿತ 300 ಯೂನಿಟ್ ವಿದ್ಯುತ್ ಮತ್ತು ನೀರಾವರಿಗಾಗಿ ರೈತರಿಗೆ ಉಚಿತ ವಿದ್ಯುತ್ ನೀಡಲಿದ್ದೇವೆ ಎಂದು ಅಖಿಲೇಶ್ ಯಾದವ್ ಭರವಸೆ ನೀಡಿದ್ದಾರೆ
ಸಾಮಾನ್ಯ ಕಾರ್ಯಕರ್ತನನ್ನು ಪಕ್ಷ ಕೈ ಬಿಡುವುದಿಲ್ಲವೆಂಬುದಕ್ಕೆ ನಾನೇ ಉದಾಹರಣೆ: ಬಿಎಸ್ ವೈ
ನಿತಿನ್ ಗಡ್ಕರಿ ಔಟ್, ಬಿಎಸ್ ವೈ ಇನ್
ಸೇವೆ ಸಲ್ಲಿಸುವ ಗೌರವಕ್ಕೆ ಆಭಾರಿ: ಮಾಜಿ ಸಿಎಂ ಬಿಎಸ್ ವೈ
ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಹಬ್ಬ ಆಚರಣೆಗೆ ಮನವಿ ಬಂದಿದೆ. ಆದ್ರೆ…: ಸಚಿವ ಆರ್. ಅಶೋಕ್
ಬಿಜೆಪಿಯ ಅತ್ಯುನ್ನತ ಮಂಡಳಿಯಲ್ಲಿ ಮಾಜಿ ಸಿಎಂ ಬಿಎಸ್ ವೈಗೆ ಸ್ಥಾನ
ಎಲ್ಲವೂ ಸರಿಯಿದೆ, ಏನೂ ತೊಂದರೆಯಿಲ್ಲ: ಸಿಎಂ ಬೊಮ್ಮಾಯಿ