Connect with us


      




ಕರ್ನಾಟಕ

ವೈಕುಂಠ ಏಕಾದಶಿಗೆ ದೇವಾಲಯಗಳು ಸಜ್ಜು

Published

on

ಬೆಂಗಳೂರು: ಜನೆವರಿ ೧೨ (ಯು.ಎನ್.ಐ.) ವೈಕುಂಠ ಏಕಾದಶಿಗೆ ನಗರದ ಹಲವು ದೇವಾಲಯಗಳು ಸಜ್ಜಾಗಿವೆ. ಕೋವಿಡ್ ಹಿನ್ನೆಲೆಯಲ್ಲಿ ಇಸ್ಕಾನ್, ದೇವಗಿರಿ ವೆಂಕಟೇಶ್ವರದಂತಹ ಕೆಲವು ದೇವಾಲಯಗಳಲ್ಲಿ ಭಕ್ತರಿಗೆ ಪ್ರವೇಶ ನೀಡುತ್ತಿಲ್ಲ. ಆದರೆ ಬಡಾವಣೆಗಳಲ್ಲಿರುವ ಸಣ್ಣ ಪುಟ್ಟ ದೇವಾಲಯಗಳು ಎಂದಿನಂತೆ ಭಕ್ತರ ಸ್ವಾಗತಕ್ಕೆ ಸಜ್ಜಾಗಿವೆ.
ವೈಕುಂಠ ಏಕಾದಶಿ ಪ್ರಯುಕ್ತ ಗುರುವಾರ ನಸುಕಿನ ವೇಳೆಗೆ ಸ್ವಾಮಿಗೆ ಅಭಿಷೇಕ, ಪೂಜೆ, ವಿಶೇಷ ಅಲಂಕಾರ ನಡೆಯಲಿದೆ. ಇದರೆ ಜತೆಗೆ ವೈಕುಂಠದ್ವಾರವನ್ನು ನಿರ್ಮಿಸಲಾಗಿದೆ. ಹೀಗಾಗಿ ಭಕ್ತರು ಬಡಾವಣೆಗಳಲ್ಲಿರುವ ಸ್ಥಳೀಯ ದೇವಾಲಯಗಳಿಗೆ ತೆರಳಿ ಸ್ವಾಮಿಯ ದರ್ಶನ ಪಡೆಯಬಹುದು. ದೇವಾಲಯಗಳಲ್ಲಿ ಭಜನೆ, ಭಕ್ತಿ ಸಂಗೀತವೂ ನಡೆಯಲಿದೆ.
ನಗರದಲ್ಲಿ ಪ್ರತಿಷ್ಠಿತ ದೇವಾಲಯಗಳು ಆನ್‍ಲೈನ್ ಮೂಲಕ ಭಕ್ತರಿಗೆ ವೀಕ್ಷಣೆಗೆ ಅವಕಾಶ ಮಾಡಿಕೊಟ್ಟರೆ, ಕೆಲವು ದೇವಾಲಯಗಳಲ್ಲಿ ಸಾಂಕೇತಿಕವಾಗಿ ಮಾತ್ರ ಪೂಜೆ, ಅಲಂಕಾರ ಮಾಡಲಾಗುತ್ತಿದೆ. ಹೀಗಾಗಿ ಇಂತಹ ದೇವಾಲಯಗಳಲ್ಲಿ ಭಕ್ತರಿಗೆ ಪ್ರವೇಶವಿರುವುದಿಲ್ಲ.
ಆನಂದ ಗೋವಿಂದ ದೇವಳ: ಅದೇ ರೀತಿ ಬೆಂಗಳೂರು ದಕ್ಷಿಣ ತಾಲ್ಲೂಕು ಕೆಂಗೇರಿ ಬಳಿ ಇರುವ ಚಂದ್ರಪ್ಪ ಸರ್ಕಲ್‍ನ ಎಸ್‍ಎಲ್‍ಎನ್ ಸಿಟಿಯಲ್ಲಿರುವ ಶ್ರೀ ಆನಂದ ಗೋವಿಂದ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ಇಂದು ಬೆಳಗ್ಗೆಯಿಂದಲೇ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯಲಿವೆ. ರಾಜರಾಜೇಶ್ವರಿ ನಗರ ನಿನಾದ ಸಾಂಸ್ಕøತಿಕ ತಂಡದ ಹರೀಶ ನರಸಿಂಹ ಅವರಿಂದ ಸಂಜೆ ಭಕ್ತಿಗೀತೆಗಳ ಗಾಯನ ಕಾರ್ಯಕ್ರಮ ಸಹ ಏರ್ಪಡಿಸಲಾಗಿದೆ.
ಗುಳಕಮಲೆ ವೀರಾಂಜನೇಯಸ್ವಾಮಿ ದೇವಳ: ಬೆಂಗಳೂರು ನಗರ ಜಿಲ್ಲೆ ಗುಳಕಮಲೆಯಲ್ಲಿರುವ ಶ್ರೀವೀರಾಂಜನೇಯಸ್ವಾಮಿ, ಶ್ರೀಸೀತಾರಾಮ ಲಕ್ಷ್ಮಣ, ಹನುಮತ್ಸಮೇತ, ಶ್ರೀ ಜಲಕಂಠೇಶ್ವರ, ಶ್ರೀ ಮಹಾಗಣಪತಿ ಹಾಗೂ ನವಗ್ರಹಗಳ ದೇವಸ್ಥಾನದಲ್ಲಿ ವೈಕುಂಠ ಏಕಾದರ್ಶಿ ಅಂಗವಾಗಿ ಬೆಳಗ್ಗೆ 5 ರಿಂದ ರಾತ್ರಿ 8.30ರವರೆಗೆ ವೈಕುಂಠ ದ್ವಾರ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ನಂತರ ದೇವರ ದರ್ಶನ ಮಾಡಬಹುದು.
ಜ್ಞಾನಭಾರತಿ ಆವರಣದ ಲಕ್ಷ್ಮೀವೆಂಕಟೇಶ್ವರ:
ಜ್ಞಾನಭಾರತಿ ಆವರಣ, ಉಲ್ಲಾಳು ಮುಖ್ಯರಸ್ತೆ, ಮುನೇಶ್ವರ ನಗರದಲ್ಲಿರುವ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಅಂಗವಾಗಿ ವೈಕುಂಠ ದ್ವಾರ ನಿರ್ಮಿಸಲಾಗಿದ್ದು, ಭಕ್ತರಿಗೆ ಪ್ರವೇಶ ಅವಕಾಶ ಕಲ್ಪಿಸಲಾಗುವುದು. ಬೆಳಗ್ಗೆ ಪಂಚಾಮೃತ ಅಭಿಷೇಕ, ತೋಮಾಲೆ ಸೇವೆ, ಅರ್ಚನೆ, ನೈವೇದ್ಯ ನಡೆಯಲಿದೆ. ಬೆಳಗ್ಗೆ 5 ರಿಂದ ರಾತ್ರಿ 10ರವರೆಗೆ ವೈಕುಂಠ ದ್ವಾರ ಪ್ರವೇಶಿಸಲು ಭಕ್ತರಿಗೆ ಅವಕಾಶ ನೀಡಲಾಗುವುದು. ಭಕ್ತರಿಗೆ ಅನ್ನದಾನವನ್ನೂ ಏರ್ಪಡಿಸಲಾಗಿದೆ.
ಇದೇ ರೀತಿ ಕೆಲವು ದೇವಾಲಯಗಳಲ್ಲಿ ಭಕ್ತರಿಗೆ ಪ್ರವೇಶವಿದೆ.
—–
ಇಸ್ಕಾನ್‍ನಲ್ಲಿ ಆನ್‍ಲೈನ್‍ನಲ್ಲಿ ವೈಕುಂಠ ಏಕಾದಶಿ
ಕೋವಿಡ್ ಹಿನ್ನೆಲೆಯಲ್ಲಿ ವೈಕುಂಠ ಏಕಾದಶಿಯಂದು ಭಕ್ತರಿಗೆ ದೇಗುಲ ಪ್ರವೇಶ ಇಲ್ಲದಿರುವುದರಿಂದ ಇಸ್ಕಾನ್ ಬೆಂಗಳೂರು ದೇವಾಲಯದಲ್ಲಿ ನೇರಪ್ರಸಾರದ ವ್ಯವಸ್ಥೆ ಮಾಡಲಾಗಿದೆ.
ಜ.13ರಂದು (ಗುರುವಾರ) ಇಸ್ಕಾನ್ ಬೆಂಗಳೂರು ವೈಕುಂಠ ಏಕಾದಶಿಯನ್ನು ಆಚರಿಸುತ್ತಿದೆ. ಆದರೆ, ಮುಂದುವರಿದ ಕೋವಿಡ್ ಸಾಂಕ್ರಾಮಿಕ ಮತ್ತು ಸಾರ್ವಜನಿಕರ ಹಿತಾಸಕ್ತಿಯಲ್ಲಿ ಸರಕಾರವು ಹೊರಡಿಸಿರುವ ಮುನ್ನೆಚ್ಚರಿಕೆಯ ಕ್ರಮವಾಗಿ ದೇವಸ್ಥಾನವು ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಿದೆ. ವಿಶೇಷ ಆಹ್ವಾನಿತರಿಗೆ ಮಾತ್ರ ದರ್ಶನದ ಅವಕಾಶವಿರುತ್ತದೆ. ಸುರಕ್ಷತೆಯ ಎಲ್ಲ ನಿಯಮಗಳನ್ನು ಪಾಲಿಸುತ್ತ ಸ್ಥಾನಿಕ ಭಕ್ತ ವೃಂದ ಉತ್ಸವವನ್ನು ಆಚರಿಸಲಿದೆ.
ಇಡೀ ಉತ್ಸವದ ನೇರಪ್ರಸಾರವನ್ನು ದೇವಸ್ಥಾನದ ಅಧಿಕೃತ ಜಾಲತಾಣ  ಮತ್ತು ಇಸ್ಕಾನ್ ಬೆಂಗಳೂರು ಯೂಟ್ಯೂಬ್ ಚಾನೆಲ್‍ನಲ್ಲಿ ಲಭ್ಯವಿರುತ್ತದೆ. ಸಾರ್ವಜನಿಕರು ಸುರಕ್ಷತೆ ದೃಷ್ಟಿಯಿಂದ ತಮ್ಮ ಮನೆಯಿಂದಲೇ ಭಾಗವಹಿಸಿ ಸ್ವಾಮಿಯ ದರ್ಶನ ಪಡೆಯಿರಿ ಎಂದು ಇಸ್ಕಾನ್  ಸಾರ್ವಜನಿಕ ಸಂಪರ್ಕ ವಿಭಾಗದ ನವೀನ ನೀರದ ದಾಸ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ

ಉ.ಪ್ರ.‌ಚುನಾವಣೆ ನಂತರ ರಾಜ್ಯದಲ್ಲಿ‌ಮಹತ್ವದ ಬದಲಾವಣೆ: ಸಿ.ಎಂ ಇಬ್ರಾಹಿಮ್

Published

on

ಬೆಂಗಳೂರು: ಜನೆವರಿ 27 (ಯು.ಎನ್.ಐ.)‌ ನಾನು ಹೇಳಿದಂತೆ ರಾಜ್ಯದಲ್ಲಿ ರಾಜಕೀಯ ಬೆಳವಣಿಗೆಗಳು ಘಟಿಸುತ್ತಾ ಬಂದಿವೆ.‌ ಉತ್ತರ ಪ್ರದೇಶ ಚುನಾವಣಾ ಬಳಿಕ ಸಾರ್ವತ್ರಿಕ ಚುನಾವಣೆ, ಇಲ್ಲವೇ ರಾಷ್ಟ್ರ ಪತಿ ಆಡಳಿತ ಬರಬಹುದು. ನಾನು ಕೊಡುವ

ಡೋಸ್ ಎಷ್ಟರ ಮಟ್ಟಿಗೆ ವರ್ಕ್ ಆಗುತ್ತೆ ನೋಡೋಣ ಎಂದು ಕಾಂಗ್ರೆಸ್ ಮುಖಂಡ ಸಿ.ಎಂ.‌ಇಬ್ರಾಹಿಂ ಮಾರ್ಮಿಕವಾಗಿ ಹೇಳಿದರು.

ಅವರಿಂದು ಸುದ್ದಿಗಾರರ ಜೊತೆ ಮಾತನಾಡಿ,  ಸಾಮಾಜಿಕ ನ್ಯಾಯ ಕೇಳಿದ್ರೆ ಈಗ ಮಾಡಿದ್ದಾರೆ. ಬೆಳೆ ಕೊಯ್ಲು‌ ಮಾಡಿ ನಮ್ಮನ್ನ ಹೊರ ಹಾಕಿದ್ದಾರೆ ಎಂದು ಆಕ್ತೋಶ ವ್ಯಕ್ತಪಡಿಸಿದ ಅವರು ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಬಿಹಾರದಿಂದಲೂ ನನಗೆ ರಾಜಕೀಯ ಆಹ್ವಾನ ಬಂದಿದೆ ಅಖಿಲೇಶ್, ಮಮತಾ ಬ್ಯಾನರ್ಜಿ ಅಥವಾ ದೇವೇಗೌಡ ಇವರಲ್ಲಿ ಯಾರ ಜೊತೆ ರಾಜಕೀಯವಾಗಿ ಗುರುತಿಸಿಕೊಳ್ಳಬೇಕು ಯೋಚನೆ ಮಾಡ್ತೀನಿ. 3 ವರ್ಷದ ವಿಧಾನ ಪರಿಷತ್ ಸ್ಥಾನಕ್ಕೂ ಶೀಘ್ರ ರಾಜೀನಾಮೆ ನೀಡುವ ಬಗ್ಗೆಯೂ ವಿಚಾರ ಮಾಡ್ತೀನಿ ಎಂದರು.

ಹೆಚ್.ಡಿ. ಕುಮಾರಸ್ವಾಮಿಯಿಂದ ಮುಂಜಾನೆ ಕರೆ ಬಂದಿತ್ತು. ಕಾಂಗ್ರೆಸ್ ನವರು ಕಾಲ್ ಮಾಡಿದ್ರು, ನಾ ಅವರ ಬಗ್ಗೆ ಹೇಳಿದ್ರೆ
120 ಇಂದ 80 ಬಂತು 80 ರಿಂದ ಎಷ್ಟು ಬರಲಿದೆ ನೋಡಿ‌ ಎಂದು ಆಕ್ರೋಶ ವ್ಯಕ್ತಡಿಸಿದ ಇಬ್ರಾಹಿಂ ನನಗೆ ಸ್ಥಾನ ತಪ್ಪಿದರ ಬಗ್ಗೆ ಸಿದ್ದರಾಮಯ್ಯ ಉತ್ತರ ಕೊಡಬೇಕು. ಎಂದರು

ಬಿಜೆಪಿ ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಅದು ಕೇಶವ ಕೃಪಾ, ನಾನು ಬಸವ ಕೃಪ ಹೇಗೆ ಒಂದಾಗಲು ಸಾಧ್ಯ ಎಂದರು.

ಜಮೀರ್ ಜೊತೆಗಿನ ಮಾತುಕತೆ ಹೇಳಲ್ಲ. ಅವರು ಕಾಂಗ್ರೆಸ್ ನಲ್ಲಿ ಇದಾರೆ. ಕಾಂಗ್ರೆಸ್ ನ ಎಲ್ಲಾ ಮುಸ್ಲಿಂ ನಾಯಕರು ನನ್ನ ಜೊತೆ ಅನ್ಯೋನ್ಯವಾಗಿದ್ದಾರೆ ಎಂದರು.

ಯಡಿಯೂರಪ್ಪ ಜೊತೆ ಒಂದಾಗುವ ವಿಚಾರವಾಗಿ ಪ್ರತಿಕ್ರಿಯಿಸಿದ ಸಿ.ಎಂ. ಇಬ್ರಾಹಿಂ ಕಾದು ನೋಡಿ, ಕಾಲಾಯ ತಷ್ಯೇಯೇ ನಮಃ ಎಂದು ಹೇಳಿದರು.

Continue Reading

ಕರ್ನಾಟಕ

ಸಿಎಂ ಭೇಟಿ ಮಾಡಿದ ಚಿಕ್ಕಮಗಳೂರು ಶಾಸಕರ ನಿಯೋಗ

Published

on

ಬೆಂಗಳೂರು: ಜನೆವರಿ 27 (ಯು.ಎನ್.ಐ.) ಶಾಸಕ ಹಾಗೂ ಬಿಜೆಪಿ ಪ್ರಧಾನ ಕಾರ್ಯಯದರ್ಶಿ ಸಿ ಟಿ ರವಿ ನೇತೃತ್ವದಲ್ಲಿ ಚಿಕ್ಕಮಗಳೂರು ಜಿಲ್ಲೆ ಶಾಸಕರು ಮುಖ್ಯಮಂತ್ರಿ‌ ಬಸವರಾಜ ಎಸ್ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದರು. ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ನಿಯೋಗದ ಅಹವಾಲುಗಳನ್ನು ಮುಖ್ಯಮಂತ್ರಿ ಆಲಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ, ಮತ್ತು ಭದ್ರಾ ಉಪಕಣವೆಯ 2 ಮತ್ತು 3 ನೇ ಹಂತದ ಯೋಜನೆಗೆ ಹಣ ಬಿಡುಗಡೆ ಹಾಗೂ ಜಿಲ್ಲೆಯ ಜಲಧಾರೆ ಯೋಜನೆಗೆ ಬಜೆಟ್ ಹಣ ನೀಡುವಂತೆ ನಿಯೋಗ ಮನವಿ ಮಾಡಿದೆ. ನಿಯೋಗದಲ್ಲಿ ಉಪ ಸಭಾಪತಿ ಪ್ರಾಣೇಶ್, ಶಾಸಕ ಸುರೇಶ್, ಬೆಳ್ಳಿ ಪ್ರಕಾಶ್, ಸಿಎಂ ರಾಜಕೀಯ ಕಾರ್ಯದರ್ಶಿ ಜೀವರಾಜ್‌ ಸಹ ಇದ್ದರು.

ಸಿಎಂ ಭೇಟಿ ಬಳಿಕ ಜೀವರಾಜ್ ಅವರು ಮಾತನಾಡಿ, ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯಿಸಿದರು. ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ. ನಮ್ಮ ಜಿಲ್ಲೆಯಲ್ಲಿ ನನಗಿಂತಲೂ ಹಿರಿಯರಿದ್ದಾರೆ, ಮೂಡಿಗೆರೆ ಎಂ ಪಿ ಕುಮಾರಸ್ವಾಮಿ ಇದಾರೆ, ತರೀಕೆರೆ ಸುರೇಶ್ ಇದಾರೆ, ಅವರಿಗೆ ಕೊಡಲಿ. ಸಿ ಟಿ ರವಿ ಮಾರ್ಗದರ್ಶನದಲ್ಲಿ ಮುಂದೆ‌ ಹೋಗ್ತೀವಿ.
ಸಂಪುಟ ವಿಸ್ತರಣೆ ಸಮಯದಲ್ಲಿ ನಮ್ಮ ಜಿಲ್ಲೆಗೆ ಅವಕಾಶ ಸಿಕ್ಕರೆ ಸಿಗಬಹುದು.. ಸಿಗದೇನೂ ಇರಬಹುದು. ಯಾರಿಗೆ ಕೊಟ್ಟರು ಸಂತೋಷ ಕೊಟ್ಟಿಲ್ಲ ಅಂದ್ರೂ ಸಂತೋಷ ಎಂದರು.

ಬಿಜೆಪಿ ಶಾಸಕರು ಕಾಂಗ್ರೆಸ್ನವರ ಸಂಪರ್ಕದಲ್ಲಿರುವ ವಿಚಾರವಾಗಿ ಮಾತನಾಡಿ, ನಮ್ಮ ಪಕ್ಷದಿಂದ ಯಾರು ಹೋಗೋದಿಲ್ಲ. ಚುನಾವಣಾ ಹತ್ತಿರ ಬಂದಾಗ ಏನ್ ಆಗುತ್ತೆ ಅನ್ನೋದು ದೇವರೊಬ್ಬರಿಗೆ ಮಾತ್ರ ಗೊತ್ತು.‌ ಒಮ್ಮೆ ಪಕ್ಷಕ್ಕೆ ಸೇರ್ಪಡೆಯಾದರೆ ಅಲ್ಲಿ ವಲಸಿಗ ಮೂಲ ಅನ್ನೋದು ಬರೋದಿಲ್ಲ.‌ ಈಶ್ವರಪ್ಪ ಉಸ್ತುವಾರಿಯಾಗಿ ಬಂದಿರೋದನ್ನ ನಾವು ಸ್ವಾಗತ ಮಾಡ್ತೀವಿ ಎಂದು ಹೇಳಿದರು.

ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಮಾತನಾಡಿ.‌ ಸಿ.ಟಿ ರವಿ ನೇತೃತ್ವದಲ್ಲಿ ನಮ್ಮ ಪಕ್ಷದ ಚಿಕ್ಕಮಗಳೂರು ಶಾಸಕರೆಲ್ಲ ಸಿಎಂ ಭೇಟಿ ಮಾಡಿದ್ವಿ. ಚಿಕ್ಕಮಗಳೂರು ಜಿಲ್ಲೆ ಸಮಸ್ಯೆ ಬಗ್ಗೆ ಚರ್ಚೆಗೆ ತೆರಳಿದ್ವಿ. ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ಮತ್ತು ಮೂಡಿಗೆರೆಯಲ್ಲಿ ತೋಟಗಾರಿಕೆ ವಿಶ್ವವಿದ್ಯಾಲಯ ಹಾಗೂ ಭದ್ರಾ ಉಪಕಣಿವೆಯ ಕಾಮಗಾರಿ, ಜಿಲ್ಲೆಯ ಜಲಧಾರೆಯ ಯೋಜನೆ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿ ಮನವಿ ಸಲ್ಲಿಸಿ ಬಂದಿದ್ದೇವೆ ಎಂದು ವಿವರಿಸಿದರು.

Continue Reading

ಕರ್ನಾಟಕ

ಸಿಎಂ‌ ಇಬ್ರಾಹಿಂ ಬಂದರೆ ಸ್ವಾಗತ: ಎಚ್‌‌‌ಡಿಕೆ

Published

on

ಬೆಂಗಳೂರು:ಜನೆವರಿ 27 (ಯು.ಎನ್.ಐ.) ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಸಿಎಂ‌ ಇಬ್ರಾಹಿಂ‌ ಅವರು ಜಾತ್ಯತೀತ ಜನತಾ ದಳಕ್ಕೆ ಬಂದರೆ ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.‌ಕುಮಾರಸ್ವಾಮಿ ಹೇಳಿದ್ದಾರೆ.

ಅವರಿಂದು ಸುದ್ದಿಗಾರರ ಜೊತೆ ಮಾತನಾಡಿ, ಇಬ್ರಾಹಿಂ ಅವರು ಹಿರಿಯ ರಾಜಕಾರಣಿ.‌ ನಮ್ಮ ಪಕ್ಷ ಹಾಗೂ ದೇವೇಗೌಡರ ಏಳು ಬೀಳುವಿನಲ್ಲೊಯೂ ಜೊತೆಯಾದವರು. ವಿರೋಧ ಪಕ್ಷದ ನಾಯಕರ ಸ್ಥಾನಕ್ಕೆ ಅವರ ಹೆಸರು ಕೇಳಿ‌ ಬಂದಿತ್ತು. ಆ ಸ್ಥಾನ ದೊರೆತರೆ ನಾಯಕರ ಉಪಯೋಗ ಮಾಡಿಕೊಳ್ಳಿ. ನಿಮ್ಮನ್ನು ದುರುಪಯೋಗ ಪಡಿಸಿಕೊಳ್ಳಲ್ಲ ಎಂದಿದ್ದೆ ಎಂದು ವಿವರಿಸಿದರು.

ಅವರಿಗೆ ಇನ್ನೂ ದೇವೇಗೌಡರು ಹಾಗೂ ನಮ್ಮ ಪಕ್ಷದ ಬಗ್ಗೆ ವ್ಯಾಮೋಹ ಇದೆ.‌ ಅವರು ಬಂದರೆ ಸ್ವಾಗತ. ನಾವು ಕದ್ದು ಮುಚ್ಚಿ ಯಾವುದನ್ನೂ ಮಾಡಿಲ್ಲ. ಇಂದೂ ಕೂಡ ನಾನು ಕರೆ ಮಾಡಿ ಮಾತಾಡಿದ್ದೀನಿ. ಅವರು ನಮ್ಮ ಪಕ್ಷಕ್ಕೆ ಬಂದರೆ ಸ್ವಾಗತ. ಜನತಾ ಪರಿವಾರದ ನಾಯಕರು ಸೆಟ್ಟಲ್ ಆಗಿದ್ದಾರೆ. ಅವರನ್ನು ವಾಪಸ್ ತರುವ ನಿರೀಕ್ಷೆ ಇಟ್ಟುಕೊಂಡಿಲ್ಲ ಎಂದರು.

ಯವ ನಾಯಕತ್ವ ತರುವ ನಿಟ್ಟಿನಲ್ಲಿ ಚಿಂತಿಸಲಾಗುತ್ತಿದೆ. ಹೊಸ ನಾಯಕರ ನೇಮಕಾತಿ‌ ಮಾಡಲಾಗುತ್ತಿದೆ. ಹೊಸ ನಾಯಕರ ಸೃಷ್ಟಿ ಮೊದಲಿನಿಂದಲೂ ನಡೆಯುತ್ತಿದೆ. ಜೆಡಿಎಸ್ ಮೊದಲಿನಿಂದಲೂ ಗುರು ಮನೆ ಇದ್ದಂತೆ. ಹಲವರು ನಾಯಕರಾಗಿ‌ ಬೆಳೆದು ಹೋಗಿದ್ದಾರೆ ಎಂದು ಪ್ರತಿಪಾದಿಸಿದರು.

Continue Reading
Advertisement
ಕರ್ನಾಟಕ23 mins ago

ಉ.ಪ್ರ.‌ಚುನಾವಣೆ ನಂತರ ರಾಜ್ಯದಲ್ಲಿ‌ಮಹತ್ವದ ಬದಲಾವಣೆ: ಸಿ.ಎಂ ಇಬ್ರಾಹಿಮ್

ಬೆಂಗಳೂರು: ಜನೆವರಿ 27 (ಯು.ಎನ್.ಐ.)‌ ನಾನು ಹೇಳಿದಂತೆ ರಾಜ್ಯದಲ್ಲಿ ರಾಜಕೀಯ ಬೆಳವಣಿಗೆಗಳು ಘಟಿಸುತ್ತಾ ಬಂದಿವೆ.‌ ಉತ್ತರ ಪ್ರದೇಶ ಚುನಾವಣಾ ಬಳಿಕ ಸಾರ್ವತ್ರಿಕ ಚುನಾವಣೆ, ಇಲ್ಲವೇ ರಾಷ್ಟ್ರ ಪತಿ...

ದೇಶ37 mins ago

ವೈಯಕ್ತಿಕ ದ್ವೇಷ: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ದುಷ್ಟರು

ನವದೆಹಲಿ: ಜನೆವರಿ 27 (ಯು.ಎನ್.ಐ.) ವೈಯಕ್ತಿಕ ದ್ವೇಷದ ಕಾರಣ ಮಹಿಳೆಯನ್ನು ಅಪಹರಿಸಿ ಆಕೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ದುಷ್ಟರು ಚಪ್ಪಲಿ ಹಾರ ಹಾಕಿ, ಮುಖಕ್ಕೆ ಕಪ್ಪು...

ಕರ್ನಾಟಕ2 hours ago

ಸಿಎಂ ಭೇಟಿ ಮಾಡಿದ ಚಿಕ್ಕಮಗಳೂರು ಶಾಸಕರ ನಿಯೋಗ

ಬೆಂಗಳೂರು: ಜನೆವರಿ 27 (ಯು.ಎನ್.ಐ.) ಶಾಸಕ ಹಾಗೂ ಬಿಜೆಪಿ ಪ್ರಧಾನ ಕಾರ್ಯಯದರ್ಶಿ ಸಿ ಟಿ ರವಿ ನೇತೃತ್ವದಲ್ಲಿ ಚಿಕ್ಕಮಗಳೂರು ಜಿಲ್ಲೆ ಶಾಸಕರು ಮುಖ್ಯಮಂತ್ರಿ‌ ಬಸವರಾಜ ಎಸ್ ಬೊಮ್ಮಾಯಿ...

ಕರ್ನಾಟಕ2 hours ago

ಸಿಎಂ‌ ಇಬ್ರಾಹಿಂ ಬಂದರೆ ಸ್ವಾಗತ: ಎಚ್‌‌‌ಡಿಕೆ

ಬೆಂಗಳೂರು:ಜನೆವರಿ 27 (ಯು.ಎನ್.ಐ.) ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಸಿಎಂ‌ ಇಬ್ರಾಹಿಂ‌ ಅವರು ಜಾತ್ಯತೀತ ಜನತಾ ದಳಕ್ಕೆ ಬಂದರೆ ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.‌ಕುಮಾರಸ್ವಾಮಿ ಹೇಳಿದ್ದಾರೆ....

ದೇಶ3 hours ago

ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ ಅಂತ್ಯ; ಶಾಲಾ-ಕಾಲೇಜುಗಳು ಬಂದ್

ಹೊಸದಿಲ್ಲಿ: ಜನೆವರಿ 27 (ಯು.ಎನ್.ಐ.) ರಾಷ್ಟ್ರ ರಾಜಧಾನಿ ಜನರಿಗೆ ದೆಹಲಿ ಸರ್ಕಾರ ಗುಡ್ ನ್ಯೂಸ್ ನೀಡಿದೆ. ದೆಹಲಿಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿರುವ  ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ ಅನ್ನು...

ಕ್ರೀಡೆ3 hours ago

ಟೀಂ ಇಂಡಿಯಾ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಟ್ವಿಟರ್ ಖಾತೆ ಹ್ಯಾಕ್

ಮುಂಬೈ: ಜನೆವರಿ ೨೭ (ಯು.ಎನ್.ಐ.) ಇತ್ತೀಚೆಗೆ ಬಿಟ್‌ಕಾಯಿನ್ ಸ್ಕ್ಯಾಮರ್ ಗಳು ಟ್ವಿಟರ್ ಖಾತೆಗಳನ್ನು ಹ್ಯಾಕ್ ಮಾಡುತ್ತಿದ್ದು, ಈಗಾಗಲೇ ಸಾಕಷ್ಟು ಮಂದಿಯ ಟ್ವಿಟರ್ ಖಾತೆ ಇದೇ ವಿಚಾರಕ್ಕೆ ಹ್ಯಾಕ್...

ಸಿನೆಮಾ3 hours ago

ನಾಗಚೈತನ್ಯ, ಸಮಂತಾ ವಿಚ್ಛೇದನಕ್ಕೆ ನಟ ನಾಗಾರ್ಜುನ ಕೊಟ್ಟ ಕಾರಣ ಏನು?

ಹೈದರಾಬಾದ್: ಜನೆವರಿ 27 (ಯು.ಎನ್.ಐ.) ಟಾಲಿವುಡ್ ಸ್ಟಾರ್ ಗಳಾದ ನಾಗಚೈತನ್ಯ ಮತ್ತು ಸಮಂತಾ ರುತ್ ಪ್ರಭು 2021ರಲ್ಲಿ ವಿಚ್ಛೇದನ ಘೋಷಿಸಿದರು. ಅಂದಿನಿಂದ ಇಮದಿನವರೆಗೆ ಅವರ ನಡುವಿನ ಪ್ರತ್ಯೇಕತೆಗೆ...

ದೇಶ4 hours ago

ಅನ್ಯ ಜಾತಿ ಹುಡುಗಿ ಮದುವೆಯಾದ ಮಗ: ತಾಯಿ ಮೇಲೆ ಹಲ್ಲೆ

ಚೆನ್ನೈ: ಜನೆವರಿ 27 (ಯು.ಎನ್.ಐ.) ಅನ್ಯ ಜಾತಿಯ ಹುಡುಗಿಯನ್ನು ಮಗ ವಿವಾಹವಾದ ಕಾರಣ ತಾಯಿಯನ್ನು ದೀಪದ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ ಘಟನೆ ತಮಿಳುನಾಡಿನ ವಿರುದುನಗರ ಜಿಲ್ಲೆಯ ತಿರುಚುಲಿ...

ಸಿನೆಮಾ4 hours ago

‘ದೇವರು ನನ್ನ ಬ್ರಾ ಸೈಜ್ ತೆಗೆದುಕೊಳ್ಳುತ್ತಿದ್ದಾರೆ’ – ನಟಿ ಶ್ವೇತಾ ತಿವಾರಿ

ಭೋಪಾಲ್: ಜನೆವರಿ 27 (ಯು.ಎನ್.ಐ.) ಕಿರುತೆರೆ ಹಾಗೂ ಹಿಂದಿ ಫಿಲಂ ನಟಿ ಶ್ವೇತಾ ತಿವಾರಿ ದೇವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಫ್ಯಾಶನ್ ಸಂಬಂಧಿತ ವೆಬ್ ಸರಣಿಯ...

ಸಿನೆಮಾ4 hours ago

ವಿವಾಹ ಜೀವನಕ್ಕೆ ಕಾಲಿರಿಸಿದ ಮೌನಿರಾಯ್, ಸೂರಜ್ ನಂಬಿಯಾರ್

ಪಣಜಿ: ಜನೆವರಿ 27 (ಯು.ಎನ್.ಐ.) ಬಾಲಿವುಡ್ ನಟಿ ಮೌನಿ ರಾಯ್ ಮತ್ತು ಉದ್ಯಮಿ ಸೂರಜ್ ನಂಬಿಯಾರ್ ಇಂದು ಗೋವಾದಲ್ಲಿ ವಿವಾಹ ಜೀವನಕ್ಕೆ ಕಾಲಿರಿಸಿದ್ದಾರೆ. ಇವರ ವಿವಾಹದ ಫೋಟೋಗಳು...

ಟ್ರೆಂಡಿಂಗ್

Share