Connect with us


      
ದೇಶ

ವೈಷ್ಣೋದೇವಿ ಭವನದಲ್ಲಿ ಕಾಲ್ತುಳಿತ.. ೧೨ ಮಂದಿ ಸಾವು

UNI Kannada

Published

on

¨

ಶ್ರೀನಗರ, ಜ ೧(ಯು ಎನ್ ಐ) ಜಮ್ಮು-ಕಾಶ್ಮೀರದ ಕತ್ರಾ ಬಳಿಯ ಸುಪ್ರಸಿದ್ಧ ಯಾತ್ರಾಸ್ಥಳ ಮಾತಾ ವೈಷ್ಣೋದೇವಿ ಭವನದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ೧೨ ಮಂದಿ ಮೃತಪಟ್ಟು, ಹೆಚ್ಚಿನ ಸಂಖ್ಯೆಯ ಮಂದಿ ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಶ್ರೀ ಮಾತಾ ವೈಷ್ಣೋದೇವಿ ನಾರಾಯಣ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕಲ್ಪಿಸಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಇಂದು ಬೆಳಗಿನಜಾವ ಕಾಲ್ತುಳಿತ ಘಟನೆ ಸಂಭವಿಸಿದೆ
ಸದ್ಯದ ಮಾಹಿತಿ ಪ್ರಕಾರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಕಾಲ್ತುಳಿತಕ್ಕೆ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.

Share