Connect with us


      




ರಾಜಕೀಯ

ಮುಂದೂಡಲ್ಪಟ್ಟ ಪರಿಷತ್;‌ ಹುಸಿಯಾದ ವಿಪಕ್ಷ ನಿರೀಕ್ಷೆ

Published

on

ಬೆಳಗಾವಿ:  (ಸುವರ್ಣಸೌಧ) ಡಿಸೆಂಬರ್‌ ೨೪ (ಯು.ಎನ್.ಐ.) ಸಭಾಪತಿ ಅವರು ಇಂದು ವಿಧಾನಪರಿಷತ್‌ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು. ಇದರಿಂದ ವಿಪಕ್ಷದವರ ನಿರೀಕ್ಷೆ ಹುಸಿಯಾಗಿದೆ.

ಇಂದು ವಿಧಾನಪರಿಷತ್‌ ನಲ್ಲಿ ಮತಾಂತರ ನಿಷೇಧ ಮಸೂದೆ ಮಂಡನೆಯಾಗುತ್ತದೆ. ಅದನ್ನು ತರ್ಕಬದ್ಧವಾಗಿ ವಿರೋಧಿಸಬೇಕು ಎಂದು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷದ ಪರಿಷತ್‌ ಸದಸ್ಯರು ಸಂಪೂರ್ಣ ತಯಾರಿ ಮಾಡಿಕೊಂಡು ಆಗಮಿಸಿದ್ದರು. ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಪೀಠದಲ್ಲಿ ಆಸೀನರಾಗುತ್ತಿದ್ದಂತೆ ಕಾಂಗ್ರೆಸಿನ ಬಿ.ಕೆ. ಹರಿಪ್ರಸಾದ್‌ ಅವರು ಪ್ರಶ್ನೋತ್ತರ ಅವಧಿಯನ್ನು ಮುಂದೂಡಿ ಮತಾಂತರ ನಿಷೇಧ ಮಸೂದೆ ಚರ್ಚೆ ಪ್ರಕ್ರಿಯೆಗೆ ಅವಕಾಶ ಕೊಡಿ ಎಂದರು. ಇತರ ವಿಪಕ್ಷ ಸದಸ್ಯರು ಇದಕ್ಕೆ ದನಿಗೂಡಿಸಿದರು. ಆದರೆ ಸಭಾಪತಿ ಅವರು ಪೂರ್ವ ನಿಗದಿತ ಅಜೆಂಡಾದಂತೆಯೇ ಕಲಾಪ ನಡೆಯುತ್ತದೆ ಎಂದರು.

ಪ್ರಶ್ನೋತ್ತರ ಅವಧಿ ಮುಕ್ತಾಯಗೊಂಡು ಧನ ವಿನಿಯೋಗ ವಿಧೇಯಕ ಮಂಡನೆಯಾಗಿ ಅದರ ಕುರಿತು ಆಡಳಿತ ಪಕ್ಷ ಹಾಗೂ ವಿಪಕ್ಷಗಳ ಸದಸ್ಯರು ಮಾತನಾಡಿದರು. ಬಳಿಕ ಪ್ರಸ್ತುತ ಸದನದ ೨೫ ಸದಸ್ಯರ ಅವಧಿ ೨೦೨೨ರ ಜನೆವರಿ ೫ಕ್ಕೆ ಮುಕ್ತಾಯವಾಗುವುದರಿಂದ ಕಾಂಗ್ರೆಸಿನ ರಘು ಆಚಾರ್‌ ಸೇರಿದಂತೆ ಉಳಿದ ಸದಸ್ಯರಿಗೆ ವಿದಾಯ ಭಾಷಣ ಮಾಡಲು ಸಭಾಪತಿ ಅವಕಾಶ ನೀಡಿದರು.

ಮಧ್ಯಾಹ್ನದ ಭೋಜನ ವಿರಾಮದ ನಂತರ ಸರ್ಕಾರ ಮಸೂದೆ ಮಂಡಿಸಬಹುದು. ಚರ್ಚೆ ಪ್ರಕ್ರಿಯೆ ಆರಂಭವಾಗುತ್ತದೆ ಎಂಬುದೇ ವಿಪಕ್ಷದವರ ನಿರೀಕ್ಷೆಯಾಗಿತ್ತು. ಆದರೆ ಭೋಜನ ವಿರಾಮದ ಬಳಿಕ ಪರಿಷತ್‌ ಕಲಾಪ ಆರಂಭಗೊಂಡರೂ ಮಸೂದೆ ಮಂಡನೆಯಾಗಲಿಲ್ಲ. ಮಸೂದೆ ಮೇಲೆ ಚರ್ಚೆಗೆ ಅವಕಾಶ ಕೊಡಬೇಕು. ಸದಸ್ಯತ್ವ ಅವಧಿ ಮುಗಿದ ಸದಸ್ಯರಿಗೆ ವಿದಾಯ ಭಾಷಣ ಮಾಡಲು ಅವಕಾಶ ನೀಡಬೇಕು ಎಂದು ಕಾಂಗ್ರೆಸ್‌ ಪಕ್ಷದ ಪರಿಷತ್‌ ಮುಖ್ಯ ಸಚೇತಕ ನಾರಾಯಣಸ್ವಾಮಿ ಪಟ್ಟು ಹಿಡಿದರು.

ಈ ಸಂದರ್ಭದಲ್ಲಿ ೫ ನಿಮಿಷ ಬರುತ್ತೇನೆ ಎಂದು ಸಭಾಪತಿ ಹೊರಟ್ಟಿ ಅವರು ಫೀಠದಿಂದ ತೆರಳಿದರು. ಪೀಠಕ್ಕೆ ಬಂದ ಉಪ ಸಭಾಪತಿ ಪ್ರಾಣೇಶ್‌ ಅವರು ಪರಿಷತ್‌ ವಿಪಕ್ಷ ನಾಯಕ ಎಸ್.‌ ಆರ್.‌ ಪಾಟೀಲರಿಗೆ ವಿದಾಯ ಭಾಷಣ ಮಾಡಲು ಅವಕಾಶ ನೀಡಿದರು. ಇವರ ಮಾತಿನ ನಂತರ ಉಪ ಸಭಾಪತಿ ಅವರು ಅನಿರ್ದಿಷ್ಟಾವಧಿಗೆ ಸದನ ಮುಂದೂಡಲ್ಪಟ್ಟಿದೆ ಎಂದು ಘೋಷಿಸಿದರು.

ರಾಜಕೀಯ

ಯುಪಿಯಲ್ಲಿ ಏಕಾಂಗಿಯಾಗಿ ಕಣಕ್ಕಿಳಿಯಲಿರುವ ಜೆಡಿ(ಯು)

Published

on

By

ನವದೆಹಲಿ, ಜ ೧೭(ಯುಎನ್ ಐ) ಸಂಯುಕ್ತ ಜನತಾ ದಳ(ಜೆಡಿಯು) ಪಕ್ಷ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳದೆ ಏಕಾಂಗಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದೆ.
ಪಕ್ಷದ ರಾಷ್ಟ್ರೀಯ ವಕ್ತಾರ ಕೆ.ಸಿ. ತ್ಯಾಗಿ. ಈ ಕುರಿತು ಪ್ರತಿಕ್ರಿಯಿಸಿ ನಮ್ಮ ಪಕ್ಷದ ನಾಯಕರು ನಾಳೆ ಲಖನೌದಲ್ಲಿ ಸಭೆ ನಡೆಸಿ, ಅಭ್ಯರ್ಥಿಗಳ ಆಯ್ಕೆ ಸಂಬಂಧ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಚುನಾವಣೆಯನ್ನು ಜಂಟಿಯಾಗಿ ಎದುರಿಸಲು ಬಿಜೆಪಿಗೆ ೩೧ ಅಭ್ಯರ್ಥಿಗಳ ಪಟ್ಟಿಯನ್ನು ಜೆಡಿ(ಯು) ಸಲ್ಲಿಸಿತ್ತು. ಆದರೆ ನಮ್ಮ ಆಹ್ವಾನಕ್ಕೆ ಬಿಜೆಪಿ ಸೂಕ್ತವಾಗಿ ಸ್ಪಂದಿಸಿಲ್ಲ ಎಂದು ಹೇಳಿದ್ದಾರೆ.
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಜೆಡಿ(ಯು) ಏಕಾಂಗಿಯಾಗಿ ಕಣಕ್ಕಿಳಿಯುವುದರಿಂದ ಬಿಹಾರದಲ್ಲಿ ಬಿಜೆಪಿ-ಜೆಡಿ(ಯು) ಪಕ್ಷಗಳ ಮೈತ್ರಿಗೆ ಯಾವುದೇ ಸಮಸ್ಯೆ ಉದ್ಭವಿಸುವುದಿಲ್ಲ ಎಂದು ತ್ಯಾಗಿ ಸ್ಪಷ್ಟಪಡಿಸಿದ್ದಾರೆ.

Continue Reading

ರಾಜಕೀಯ

ನಾರಾಯಣ ಗುರುಗಳಿಗೆ ಎಸಗಿರುವ ಅಪಮಾನ.. “ಹಿಂದು ಹೃದಯ ಸಾಮ್ರಾಟ” ಮೋದಿ ಗಮನಕ್ಕೆ ಬಂದಿಲ್ಲವೇ… ಸಿದ್ದು ಪ್ರಶ್ನೆ

Published

on

By

ಬೆಂಗಳೂರು, ಜ 16(ಯುಎನ್‌ ಐ) ಸಮಾಜ ಸುಧಾರಕ ನಾರಾಯಣ ಗುರುಗಳಿಗೆ ಮಾಡಿರುವ ಅವಮಾನಕ್ಕಾಗಿ ಕೇಂದ್ರದ
ಬಿಜೆಪಿ ನೇತೃತ್ವದ ಸರ್ಕಾರ ದೇಶದ ಕ್ಷಮೆ ಕೇಳಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ತಮ್ಮ ಮೂಗಿನಡಿಯಲ್ಲಿಯೇ ನಾರಾಯಣ ಗುರುಗಳಿಗೆ ಮಾಡಿರುವ ಅವಮಾನದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಇನ್ನೂ ಪ್ರತಿಕ್ರಿಯಿಸದೆ
ಇರುವುದು ಆಶ್ಚರ್ಯಕರ.ಇದನ್ನು ಹೇಗೆ ಅರ್ಥೈಸಬೇಕು? ಈ ಅವಮಾನಕ್ಕೆ ಸಹಮತ ಇದೆಯೆಂದೇ? ಎಂದು ಸಿದ್ದರಾಮಯ್ಯ ಸರಣಿ ಟ್ವೀಟ್‌ ಗಳಲ್ಲಿ ಪ್ರಶ್ನಿಸಿದ್ದಾರೆ.

ಈ ಬಾರಿಯ ಗಣರಾಜ್ಯೋತ್ಸವದಲ್ಲಿ ನಾರಾಯಣ ಗುರುಗಳ ಸ್ತಬ್ದಚಿತ್ರಕ್ಕೆ ಪ್ರಾಧಾನ್ಯ ಕೊಟ್ಟು ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ನಾನು ಮುಖ್ಯಮಂತ್ರಿಯಾಗಿದ್ದಾಗ ನಾರಾಯಣ ಗುರುಗಳ ಜಯಂತಿಯನ್ನು
ರಾಜ್ಯ ಸರ್ಕಾರವೇ ಅಧಿಕೃತವಾಗಿ ಆಚರಿಸಬೇಕೆಂಬ ನಿರ್ಧಾರ ಕೈಗೊಂಡೆ. ಇದರಿಂದಾಗಿ
ಇಂದು ರಾಜ್ಯದ ಮೂಲೆ ಮೂಲೆಗೆ ಗುರುಗಳ ಚಿಂತನೆಯ ಸಂದೇಶ ತಲುಪುತ್ತಿದೆ‌ ಎಂಬ ಹೆಮ್ಮೆ ಮತ್ತು
ತೃಪ್ತಿ ನನ್ನದು ಎಂದು ಹೇಳಿದ್ದಾರೆ.

ಹಿಂದೂ ಧರ್ಮದ ಸುಧಾರಕ ನಾರಾಯಣ ಗುರುಗಳ ಸ್ತಬ್ದಚಿತ್ರಕ್ಕೆ
ಅವಕಾಶ ನಿರಾಕರಿಸಿ ಅವಮಾನಿಸಿರುವುದು ‘ಹಿಂದು ಹೃದಯ ಸಾಮ್ರಾಟ’ ಎಂದು ಕರೆಸಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೆ ಇ‌ನ್ನೂ ಬಂದಿಲ್ಲವೇ? ಶತಮಾನದ ಹಿಂದೆಯೇ
ಅಸ್ಪೃಶ್ಯತೆ ಮತ್ತು ಪುರೋಹಿತಷಾಹಿ ವ್ಯವಸ್ಥೆ ವಿರುದ್ದ ಸಿಡಿದೆದ್ದು ಹಿಂದೂ ಧರ್ಮದ ಸುಧಾರಣೆಗೆ ತಮ್ಮನ್ನು ಅರ್ಪಿಸಿಕೊಂಡಿದ್ದ ನಾರಾಯಣ ಗುರುಗಳಿಗೆ ಅವಮಾನಿಸಿರುವ ಬಿಜೆಪಿ ಹಾಗೂ ಕೇಂದ್ರ ಸರ್ಕಾರಕ್ಕೆ ಹಿಂದೂ ಧರ್ಮದ ಬಗ್ಗೆ ಮಾತನಾಡುವ ಯಾವ ನೈತಿಕತೆ ಇದೆ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನಾರಾಯಣ ಗುರುಗಳ ಸ್ತಬ್ದಚಿತ್ರಕ್ಕೆ ಯಾವ ಕಾರಣಕ್ಕಾಗಿ ಅವಕಾಶ ನಿರಾಕರಿಸಲಾಗಿದೆ? ನಾರಾಯಣ ಗುರುಗಳು ಹಿಂದೂ ಧರ್ಮಕ್ಕೆ ಸೇರಿದವರಲ್ಲವೇ?
ಅಂತಹ ಅಭಿಪ್ರಾಯವನ್ನು ಬಿಜೆಪಿ ಹೊಂದಿದ್ದರೆ ಹಾಗೆಂದು ಮುಕ್ತವಾಗಿ ಹೇಳುವ ಧೈರ್ಯ ತೋರಲಿ ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ
ಗಣರಾಜ್ಯೋತ್ಸವ ಪರೇಡ್‌ನಲ್ಲಿ ಸಮಾಜ ಸುಧಾರಕ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವುದು ತಳಸಮುದಾಯದ ಮಹಾಪುರುಷರ ಬಗ್ಗೆ ಬಿಜೆಪಿ ಮತ್ತು ಕೇಂದ್ರ ಸರ್ಕಾರಕ್ಕೆ ಇರುವ ಪೂರ್ವಗ್ರಹ ಮತ್ತು ತಿರಸ್ಕಾರಕ್ಕೆ ಇದು ಸಾಕ್ಷಿ ಎಂದು ಹೇಳಿದ್ದಾರೆ.

Continue Reading

ರಾಜಕೀಯ

ಮುಲಾಯಂಸಿಂಗ್‌ ಯಾದವ್‌ ಕಿರಿಯಸೊಸೆ ಬಿಜೆಪಿಗೆ…?

Published

on

By

ಲಕ್ನೋ, ಜ 16(ಯುಎನ್ ಐ) ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ಸಾಕಷ್ಟು ಪಕ್ಷಾಂತರಗಳಿಗೆ ಕಾರಣವಾಗಿದೆ. ಸಮಾಜವಾದಿ ಪಕ್ಷದ ಪರಮೋಚ್ಚ ನಾಯಕ ಮುಲಾಯಂ ಸಿಂಗ್ ಯಾದವ್ ಕಿರಿಯ ಸೊಸೆ ಅಪರ್ಣಾ ಯಾದವ್ ಬಿಜೆಪಿ ಸೇರುವ ಸಾಧ್ಯತೆಯಿದೆ ಎಂದು ನಂಬಲರ್ಹ ಮೂಲಗಳು ಹೇಳಿವೆ.
ಅಪರ್ಣಾ ಸಿಂಗ್ ಯಾದವ್ ಅವರು ಮುಲಾಯಂ ಸಿಂಗ್ ಅವರ ಕಿರಿಯ ಪುತ್ರ ಪ್ರತೀಕ್ ಯಾದವ್ ಅವರ ಪತ್ನಿ. 2017ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿ, ಬಿಜೆಪಿಯ ರೀಟಾ ಬಹುಗುಣ ಜೋಶಿ ಎದುರು ಪರಾಭವಗೊಂಡಿದ್ದರು. ನಂತರದ ದಿನಗಳಲ್ಲಿ ಸಮಾಜವಾದಿ ಪಕ್ಷದಲ್ಲಿದ್ದರೂ ಎನ್ ಡಿ ಎ ಸರ್ಕಾರದ ಕ್ರಮಗಳನ್ನು ಶ್ಲಾಘಿಸುತ್ತಿದ್ದರು. ಈಗ ಅಪರ್ಣಾ ಯಾದವ್ ಬಿಜೆಪಿ ಸೇರುವ ಸಾಧ್ಯತೆಯ ಬಗ್ಗೆ ಮೂಲಗಳು ಹೇಳಿವೆ.
ಸಮಾಜವಾದಿ ಪಕ್ಷದಿಂದ ಈಗಾಗಲೇ ಹಲವಾರು ಮಂದಿ ಪಕ್ಷಾಂತರ ಮಾಡಿದ್ದು, ಈ ಮಧ್ಯೆ ಅಪರ್ಣಾ ಯಾದವ್ ಬಿಜೆಪಿಗೆ ಸೇರಿದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಮೇಲೆ ಪರಿಣಾಮ ಉಂಟಾಗಬಹುದು ಎಂದು ವಿಶ್ಲೇಷಿಸಲಾಗುತ್ತಿದೆ
ಇತ್ತೀಚೆಗೆ, ಯೋಗಿ ಸಂಪುಟದಲ್ಲಿ ಸಚಿವರಾಗಿದ್ದ ಸ್ವಾಮಿ ಪ್ರಸಾದ್ ಮೌರ್ಯ, ಧರಂ ಸಿಂಗ್ ಸೈನಿ ಇತರ ಶಾಸಕರು.. ಬೆಂಬಲಿಗರೊಂದಿಗೆ ಸಮಾಜವಾದಿ ಪಕ್ಷ ಸೇರ್ಪಡೆಗೊಂಡಿದ್ದರು.

Continue Reading
Advertisement
ದೇಶ1 min ago

ದೇಶವನ್ನು ಕೊರೋನಾ ಮುಕ್ತಗೊಳಿಸಲು ಪಣ ತೊಡೋಣ; ಕೇಜ್ರಿವಾಲ್

ನವದೆಹಲಿ: ಜನೆವರಿ 17 (ಯು.ಎನ್.ಐ.) ಸಾಂಕ್ರಾಮಿಕ ರೋಗವಾದ ಕೋವಿಡ್ -೧೯ ಪರಿಸ್ಥಿತಿಯನ್ನು ಆಪಾದನೆ ಮಾಡುತ್ತಾ ಕುಳಿತುಕೊಂಡರೆ ಯಾವುದೇ ಪ್ರಯೋಜನವಿಲ್ಲ. ಇಡೀ ದೇಶದಿಂದ ತೊಡೆದುಹಾಕು ಪಣ ತೊಡಬೇಕು ಎಂದು...

ಸಿನೆಮಾ18 mins ago

ಹಿಂದಿಯಲ್ಲಿ ತೆರೆ ಕಾಣುತ್ತಿದೆ ಅಲ್ಲು ಅರ್ಜುನ್‌ ಅಭಿನಯದ ‘ಅಲಾ ವೈಕುಂಠಪುರಮುಲು’

ಹೈದರಾಬಾದ್: ಜನೆವರಿ 17 (ಯು.ಎನ್.ಐ.) ಇದೀಗ ಟಾಲಿವುಡ್ ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಪುಷ್ಪ ದಿ ರೈಸ್ ಸಿನಿಮಾದ ಯಶಸ್ಸಿನಲ್ಲಿದ್ದಾರೆ. ಮತ್ತೊಂದು ಸಂತೋಷದ ವಿಚಾರವೆಂದರೆ ಅಲ್ಲು ಅರ್ಜುನ್‌...

ದೇಶ34 mins ago

ಮೂವರು ಪಿಎಲ್ ಎಫ್ ಐ ಸಂಘಟನೆ ನಕ್ಸಲರ ಬಂಧನ

ಖುಂಟಿ: ಜನೆವರಿ 17 (ಯು.ಎನ್.ಐ.) ನಿಷೇಧಿತ ಪೀಪಲ್ಸ್ ಲಿಬರೇಶನ್ ಫ್ರಂಟ್ ಆಫ್ ಇಂಡಿಯಾ (ಪಿಎಲ್ ಎಫ್‌ಐ) ಸಂಘಟನೆಗೆ ಸೇರಿದ 14 ವರ್ಷದ ಅಪ್ರಾಪ್ತ ಸೇರಿದಂತೆ ಮೂವರು ಮೂವರು...

ದೇಶ38 mins ago

ಪದ್ಮಶ್ರೀ ಪುರಸ್ಕೃತೆ, ಸಾಮಾಜಿಕ ಕಾರ್ಯಕರ್ತೆ ಶಾಂತಿ ದೇವಿ ನಿಧನ: ಮೋದಿ ಸಂತಾಪ

ರಾಯಗಡ: ಜನೆವರಿ ೧೭ (ಯು.ಎನ್.ಐ.) ಪದ್ಮಶ್ರೀ ಪುರಸ್ಕೃತೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಶಾಂತಿ ದೇವಿ ಭಾನುವಾರ ರಾತ್ರಿ ಒಡಿಶಾದ ರಾಯಗಡ ಜಿಲ್ಲೆಯ ಗುಣಪುರದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ....

ಕರ್ನಾಟಕ48 mins ago

ಪಿಎಂಎಫ್ಎಂಇ ಯೋಜನೆಗೆ ಶೇ.15 ರಷ್ಟು ರಾಜ್ಯದಿಂದ ಹೆಚ್ಚುವರಿ ಸಹಾಯಧನ

ಬೆಂಗಳೂರು: ಜನೆವರಿ 17 (ಯು.ಎನ್.ಐ.)ರೈತರಿಗೆ ಬಲತುಂಬಲು ರಾಜ್ಯ ಸರ್ಕಾರ ಕೇಂದ್ರದ ಆತ್ಮ ನಿರ್ಭರ ಭಾರತ ಅಭಿಯಾನ (ಪಿಎಂಎಫ್ಎಂಇ) ಯೋಜನೆಗೆ ಸಹಾಯಧನವನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ. ಪಿಎಂಎಫ್ಎಂಇ ಯೋಜನೆಗೆ...

ಬೆಂಗಳೂರು1 hour ago

ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಗೆ ಕೋವಿಡ್

ಬೆಂಗಳೂರು, ಜ ೧೭(ಯುಎನ್ ಐ) ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಕಳೆದ ನಾಲ್ಕೈದು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆಆರ್ ಟಿ...

ದೇಶ1 hour ago

ಉಪಯುಕ್ತ ಮಾಹಿತಿ ; 5 ಸಾವಿರ ಅಲ್ಲ, ಕೇವಲ ₹260 ರಲ್ಲಿ ಒಮೈಕ್ರಾನ್ ಪತ್ತೆ ಹಚ್ಚಿ!

ಬೆಂಗಳೂರು : ಜನೆವರಿ 17 (ಯು.ಎನ್.ಐ.) ಪ್ರತಿ ದಿನ ಒಮೈಕ್ರಾನ್ ಸೋಂಕು ದೇಶದಲ್ಲಿ ವೇಗವಾಗಿ ಹರಡಲಾರಂಭಿಸಿದೆ. ಕೊರೊನಾ ರೂಪಾಂತರಗಳಿಗಿಂತ ಒಮೈಕ್ರಾನ್ ಹೆಚ್ಚು ಸಾಂಕ್ರಾಮಿಕವಾಗಿದ್ದು, ಜೀನೋಮ್ ಸೀಕ್ವೆನ್ಸಿಂಗ್ ಟೆಸ್ಟ್‌ನೊಂದಿಗೆ...

ದೇಶ1 hour ago

ಐಐಟಿ ಬಾಂಬೆಯ ವಿದ್ಯಾರ್ಥಿ ಆತ್ಮಹತ್ಯೆ

ಮುಂಬೈ: ಜನೆವರಿ 17  (ಯು.ಎನ್.ಐ.) ಐಐಟಿ ಬಾಂಬೆಯ ವಿದ್ಯಾರ್ಥಿ ಸೋಮವಾರ ಮುಂಜಾನೆ ಇಲ್ಲಿನ ಪೊವೈ ಕ್ಯಾಂಪಸ್ ನಲ್ಲಿರುವ ತನ್ನ ಹಾಸ್ಟೆಲಿನ ಟೆರೇಸ್‌ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ...

ಕರ್ನಾಟಕ2 hours ago

ಕೋವಿಡ್‌ ಸೋಂಕು ಹೆಚ್ಚು; ಸಾವು ಕಡಿಮೆ:‌ ಸಚಿವ ಅಶೋಕ್

ಬೆಂಗಳೂರು: ಜನೆವರಿ ೧೭ (ಯು.ಎನ್.ಐ.) ರಾಜ್ಯದಲ್ಲಿ ಕೋವಿಡ್‌ ಸೋಂಕಿನ ಪ್ರಮಾಣ ಹೆಚ್ಚಾಗಿದೆ.  ಸಾವಿನ ಪ್ರಮಾಣ ಗಣನೀಯವಾಗಿ ಕಡಿಮೆ ಇದೆ ಎಂದು ಕಂದಾಯ ಸಚಿವ ಆರ್.‌ ಅಶೋಕ್‌ ತಿಳಿಸಿದರು....

ಆರೋಗ್ಯ2 hours ago

ದೇಶದಲ್ಲಿ ಕಳೆದ ೨೪ ಗಂಟೆಗಳಲ್ಲಿ ೨ ಲಕ್ಷ ೫೮ ಸಾವಿರ ಕೋವಿಡ್ ಪ್ರಕರಣ

ನವದೆಹಲಿ,ಜ ೧೭(ಯು ಎನ್ ಐ)ದೇಶದಲ್ಲಿ ಈವರೆಗೆ ೮ ಸಾವಿರದ ೨೦೯ ಕೋವಿಡ್-೧೯ ರೂಪಾಂತರಿ ಒಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿವೆ. ನಿನ್ನೆ ಒಂದೇ ದಿನ ಶೇಕಡ ೬ರಷ್ಟು ಪ್ರಕರಣಗಳು...

ಟ್ರೆಂಡಿಂಗ್

Share