Connect with us


      
ರಾಜಕೀಯ

ಚುನಾವಣಾ ಫಲಿತಾಂಶ ಸಮಾಧಾನ ತಂದಿದೆ: ಡಿಕೆಶಿ

UNI Kannada

Published

on

ಬೆಂಗಳೂರು,ಡಿ.14(ಯು.ಎನ್.ಐ)ಮೇಲ್ಮನೆ ಚುನಾವಣಾ ಫಲಿತಾಂಶ ಸಮಾಧಾನ ತಂದಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್,ನಮ್ಮ ಪಕ್ಷದ ಮುಖಂಡರು ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡಿದ್ದಾರೆ. ಹಲವು ಕಡೆ ಕೊನೆ ಕ್ಷಣಕ್ಕೆ ಅಭ್ಯರ್ಥಿ ಹಾಕಿ ಅಲ್ಪ ಮತದಿಂದ ಸೋತಿದ್ದೇವೆ,ನಮ್ಮ ಅಭ್ಯರ್ಥಿಗಳು ಪೈಪೋಟಿ ನೀಡಿದ್ದಾರೆ. ಆಡಳಿತಾರೂಢ ಪಕ್ಷಕ್ಕೆ ಒಂದು ಲಾಭ ಇದ್ದೇಯಿದೆ. ಅದನ್ನು ಅವರು ಸಂಪೂರ್ಣ ದುರ್ಬಳಕೆ ಮಾಡಿಕೊಂಡಿದ್ದಾರೆ.ಕಳೆದ ಬಾರಿ ಸೋತ ಕಡೆ ಈ ಬಾರಿ ನಾವು ಗೆದ್ದಿದ್ದೇವೆ.ಕೆಲವು ಕಡೆ ಸೀಟು ಕಳೆದು ಕೊಂಡಿದ್ದೇವೆ
ಪರಿಷತ್ ನಲ್ಲಿ ಬಹುಮತಕ್ಕಾಗಿ ನಾವು ಹೋರಾಟ ಮಾಡಿಲ್ಲ. ಅದನ್ನೆಲ್ಲಾ ನಾವು ಲೆಕ್ಕ ಹಾಕಿಲ್ಲ.ಉತ್ತಮ ಫಲಿತಾಂಶ ನಿರೀಕ್ಷೆ ಮಾಡಿದ್ದೇವೆ.ಒಟ್ಟಾರೆ ಫಲಿತಾಂಶ ಸಮಾಧಾನ ತಂದಿದೆ ಎಂದರು.

Share