Connect with us


      
ರಾಜಕೀಯ

ವಿ.ಎಸ್.ಆಚಾರ್ಯರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕೋಟ

Kumara Raitha

Published

on

ಬೆಂಗಳೂರು: ಜನೆವರಿ 06 (ಯು.ಎನ್.ಐ.)  ಇತ್ತೀಚೆಗೆ ನಡೆದ ಸ್ಥಳೀಯಾಡಳಿತ ಸಂಸ್ಥೆಗಳ ಜ‌ನ ಪ್ರತಿನಿಧಿಗಳ ಚುನಾವಣೆಯಲ್ಲಿ ವಿಧಾನ ಪರಿಷತ್ತಿಗೆ ಸತತ ನಾಲ್ಕನೇ ಬಾರಿಗೆ ಆಯ್ಕೆಯಾದ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ  ಕೋಟ ಶ್ರೀನಿವಾಸ ಪೂಜಾರಿ ಇಂದು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ  ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಹಾಗೂ ಸಭಾಪತಿ  ಬಸವರಾಜ ಹೊರಟ್ಟಿ ಸಮ್ಮುಖದಲ್ಲಿ ರಾಜಕಾರಣಿ ದಿವಂಗತ ಡಾ. ವಿ.ಎಸ್ ಆಚಾರ್ಯ ಅವರ ಹೆಸರಿನಲ್ಲಿ ಪ್ರಮಾನ ವಚನ ಸ್ವೀಕರಿಸಿದ್ದಾರೆ.

ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಡಾ.ವಿ.ಎಸ್. ಆಚಾರ್ಯ ಅವರ ಸಾಕ್ಷಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕೋಟ, “ನನ್ನ ಆದರ್ಶ ರಾಜಕಾರಣಿ ಡಾ.ವಿಎಸ್.ಆಚಾರ್ಯರ ಸಾಕ್ಷಿಯಾಗಿ ಪ್ರಾಮಾಣಿಕವಾಗಿ ಶ್ರದ್ಧೆಯಿಂದ ಕೆಲಸ ಮಾಡುತ್ತೇನೆ” ಎಂದು ಪ್ರಮಾಣ ವಚನ ಸ್ವೀಕರಿಸಿದರು

Share