Published
4 months agoon
ಬೆಂಗಳೂರು:ಜನೆವರಿ 27 (ಯು.ಎನ್.ಐ.) ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಸಿಎಂ ಇಬ್ರಾಹಿಂ ಅವರು ಜಾತ್ಯತೀತ ಜನತಾ ದಳಕ್ಕೆ ಬಂದರೆ ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಅವರಿಂದು ಸುದ್ದಿಗಾರರ ಜೊತೆ ಮಾತನಾಡಿ, ಇಬ್ರಾಹಿಂ ಅವರು ಹಿರಿಯ ರಾಜಕಾರಣಿ. ನಮ್ಮ ಪಕ್ಷ ಹಾಗೂ ದೇವೇಗೌಡರ ಏಳು ಬೀಳುವಿನಲ್ಲೊಯೂ ಜೊತೆಯಾದವರು. ವಿರೋಧ ಪಕ್ಷದ ನಾಯಕರ ಸ್ಥಾನಕ್ಕೆ ಅವರ ಹೆಸರು ಕೇಳಿ ಬಂದಿತ್ತು. ಆ ಸ್ಥಾನ ದೊರೆತರೆ ನಾಯಕರ ಉಪಯೋಗ ಮಾಡಿಕೊಳ್ಳಿ. ನಿಮ್ಮನ್ನು ದುರುಪಯೋಗ ಪಡಿಸಿಕೊಳ್ಳಲ್ಲ ಎಂದಿದ್ದೆ ಎಂದು ವಿವರಿಸಿದರು.
ಅವರಿಗೆ ಇನ್ನೂ ದೇವೇಗೌಡರು ಹಾಗೂ ನಮ್ಮ ಪಕ್ಷದ ಬಗ್ಗೆ ವ್ಯಾಮೋಹ ಇದೆ. ಅವರು ಬಂದರೆ ಸ್ವಾಗತ. ನಾವು ಕದ್ದು ಮುಚ್ಚಿ ಯಾವುದನ್ನೂ ಮಾಡಿಲ್ಲ. ಇಂದೂ ಕೂಡ ನಾನು ಕರೆ ಮಾಡಿ ಮಾತಾಡಿದ್ದೀನಿ. ಅವರು ನಮ್ಮ ಪಕ್ಷಕ್ಕೆ ಬಂದರೆ ಸ್ವಾಗತ. ಜನತಾ ಪರಿವಾರದ ನಾಯಕರು ಸೆಟ್ಟಲ್ ಆಗಿದ್ದಾರೆ. ಅವರನ್ನು ವಾಪಸ್ ತರುವ ನಿರೀಕ್ಷೆ ಇಟ್ಟುಕೊಂಡಿಲ್ಲ ಎಂದರು.
ಯವ ನಾಯಕತ್ವ ತರುವ ನಿಟ್ಟಿನಲ್ಲಿ ಚಿಂತಿಸಲಾಗುತ್ತಿದೆ. ಹೊಸ ನಾಯಕರ ನೇಮಕಾತಿ ಮಾಡಲಾಗುತ್ತಿದೆ. ಹೊಸ ನಾಯಕರ ಸೃಷ್ಟಿ ಮೊದಲಿನಿಂದಲೂ ನಡೆಯುತ್ತಿದೆ. ಜೆಡಿಎಸ್ ಮೊದಲಿನಿಂದಲೂ ಗುರು ಮನೆ ಇದ್ದಂತೆ. ಹಲವರು ನಾಯಕರಾಗಿ ಬೆಳೆದು ಹೋಗಿದ್ದಾರೆ ಎಂದು ಪ್ರತಿಪಾದಿಸಿದರು.
ನಗರದಲ್ಲಿ ಎಲ್ಲೆಡೆ ಕಳಪೆ ಕಾಮಗಾರಿ: ಎಚ್.ಡಿ.ಕುಮಾರಸ್ವಾಮಿ
ಪರಿಷತ್ ಟಿಕೆಟ್ ಹಂಚಿಕೆ: ಕಾಂಗ್ರೆಸ್ನಿಂದ ಒಮ್ಮತದ ಅಭ್ಯರ್ಥಿಗಳು ಶಿಫಾರಸು-ಡಿಕೆಶಿ
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ: ಈಶ್ವರಪ್ಪ ಪ್ರತಿಕ್ರಿಯೆ
ಮಳೆ ಅನಾಹುತ: ಸಚಿವರ ನೇತೃತ್ವದಲ್ಲಿ 8 ಕಾರ್ಯಪಡೆ ರಚನೆ
ಎಫ್ಡಿಐ ಹೂಡಿಕೆಯಲ್ಲಿ ರಾಜ್ಯಕ್ಕೆ ಸಿಂಹಪಾಲು: ಸಿಎಂ
ದುರಹಂಕಾರವಲ್ಲ… ಅದು ವಿಶ್ವಾಸ: ರಾಹುಲ್ ಗಾಂಧಿಗೆ ಸಚಿವ ಜೈಶಂಕರ್ ತಿರುಗೇಟು