Connect with us


      
ದೇಶ

ಬಿಜೆಪಿಯ ಬೆದರಿಕೆ ತಂತ್ರ ನಾವು ಹೆದರುವುದಿಲ್ಲ: ರಾಹುಲ್ ಗಾಂಧಿ

Vanitha Jain

Published

on

ಬೆಂಗಳೂರು: ಆ 04 (ಯು.ಎನ್.ಐ.) ನ್ಯಾಷನಲ್ ಹೆರಾಲ್ಡ್ ಪ್ರಕರಣದ ಜಾರಿ ನಿರ್ದೇಶನಾಲಯ (ಇಡಿ) ತನಿಖೆಯು ಬಿಜೆಪಿಯ ಬೆದರಿಕೆ ತಂತ್ರ ಎಂದು ಹೇಳಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾವು ಹೆದರುವುದಿಲ್ಲ ಎಂದು ಹೇಳಿದ್ದಾರೆ.

ತನಿಖಾ ಸಂಸ್ಥೆಯು ದೆಹಲಿಯಲ್ಲಿರುವ ಯಂಗ್ ಇಂಡಿಯಾ ಕಚೇರಿಯನ್ನು ಸೀಲ್ ಮಾಡಿದ ಒಂದು ದಿನದ ನಂತರ ಈ ಹೇಳಿಕೆ ನೀಡಿದ್ದಾರೆ.

ಬುಧವಾರ, ದೆಹಲಿಯಲ್ಲಿರುವ ಕಾಂಗ್ರೆಸ್ ಒಡೆತನದ ನ್ಯಾಷನಲ್ ಹೆರಾಲ್ಡ್ ಕಚೇರಿಯಲ್ಲಿ ನಡೆಯುತ್ತಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದ ಭಾಗವಾಗಿ ತನಿಖಾ ಸಂಸ್ಥೆಯು ಯಂಗ್ ಇಂಡಿಯ ಕಚೇರಿಯನ್ನು ಸೀಲ್ ಮಾಡಿದೆ.

ಸಂಸ್ಥೆಯಿಂದ ಪೂರ್ವಾನುಮತಿ ಪಡೆಯದೆ ಆವರಣವನ್ನು ತೆರೆಯಬಾರದು ಎಂದೂ ಇಡಿ ಸೂಚನೆ ನೀಡಿದೆ. ಉಳಿದಂತೆ ಹೆರಾಲ್ಡ್ ಹೌಸ್ ಕಟ್ಟಡದಲ್ಲಿರುವ ನ್ಯಾಷನಲ್ ಹೆರಾಲ್ಡ್ ಕಚೇರಿ ಬಳಕೆಗೆ ಮುಕ್ತವಾಗಿದೆ.

Share