Connect with us


      




ದೇಶ

ಇದುವರೆಗೆ ಬಿಜೆಪಿ ಎಷ್ಟು ಮಂದಿಗೆ ಉದ್ಯೋಗ ನೀಡಿದೆ? ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ

Vanitha Jain

Published

on

ನವದೆಹಲಿ: ಫೆಬ್ರವರಿ 02 (ಯು.ಎನ್.ಐ.) ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಸರ್ಕಾರಿ ಉದ್ಯೋಗಗಳು ಕಡಿಮೆಯಾಗುತ್ತಿರುವುದರಿಂದ ಯುವಕರು ಸಂಕಷ್ಟದಲ್ಲಿದ್ದಾರೆ. ಉದ್ಯೋಗದ ಭರವಸೆ ನೀಡಿದ್ದ ಬಿಜೆಪಿ ಇದುವರೆಗೆ ಎಷ್ಟು ಮಂದಿಗೆ ಉದ್ಯೋಗದ ಭರವಸೆ ನೀಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದಲ್ಲಿ ಒಂಬತ್ತು ಲಕ್ಷ ಹುದ್ದೆಗಳು ಖಾಲಿ ಇವೆ. ರೈಲ್ವೇಯಲ್ಲಿ 15%, ರಕ್ಷಣೆಯಲ್ಲಿ 40% ಮತ್ತು ಗೃಹ ವ್ಯವಹಾರಗಳಲ್ಲಿ 12% ಹುದ್ದೆಗಳು ಖಾಲಿ ಇವೆ. ಇಂದು ನಗರ ಪ್ರದೇಶಗಳಲ್ಲಿ ನಿರುದ್ಯೋಗ ದರ 9% ಮತ್ತು ಗ್ರಾಮೀಣ ಪ್ರದೇಶದಲ್ಲಿ 7.2%ರಷ್ಟಿದೆ ಎಂದು ಹೇಳಿದರು.

2014ರಲ್ಲಿ ಬಿಜೆಪಿ ಪ್ರತಿ ವರ್ಷ 2 ಕೋಟಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿತ್ತು. ಇಷ್ಟೊತ್ತಿಗೆ 15 ಕೋಟಿ ಜನರಿಗೆ ಉದ್ಯೋಗ ನೀಡಬೇಕಿತ್ತು. ಆದರೆ ನಿಜವಾಗಿಯೂ ಬಿಜೆಪಿ ಎಷ್ಟು ಮಂದಿಗೆ ಉದ್ಯೋಗ ನೀಡಿದೆ? ಈ ಬಾರಿಯ ಬಜೆಟ್ ಮುಂದಿನ 5 ವರ್ಷಗಳಲ್ಲಿ ಕೇವಲ 60 ಲಕ್ಷ ಉದ್ಯೋಗಗಳ ಭರವಸೆ ನೀಡಿದೆ ಎಂದು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು.

Share